ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಪುಣೆ ತಂಡ 8 ವಿಕೆಟ್ ಗೆ 171 ರನ್ ಗಳ ಸವಾಲಿನ ಮೊತ್ತ ದಾಖಲಿಸಿತು. 172 ರನ್ ಗಳ ಗುರಿ ಬೆನ್ನಟ್ಟಿದ ಗುಜರಾತ್ ಲಯನ್ಸ್ ಪರ ಮೆಕ್ಕಲಂ ಮತ್ತು ಡ್ವೇನ್ ಸ್ಮಿತ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 18 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿ ಗೆಲುವಿನ ನಗೆ ಬೀರಿದೆ.