ಐಐಸಿಸಿ ಸಭೆಯಲ್ಲಿ ಶ್ರೀನಿವಾಸನ್ ಬಿಸಿಸಿಐ ಪ್ರತಿನಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಪದಚ್ಯುತ ಅಧ್ಯಕ್ಷ ಎನ್ ಶ್ರೀನಿವಾಸನ್ ಅವರು ಮುಂದಿನ ವಾರ ನಡೆಯಲಿರುವ....
ಶ್ರೀನಿವಾಸನ್
ಶ್ರೀನಿವಾಸನ್
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಪದಚ್ಯುತ ಅಧ್ಯಕ್ಷ ಎನ್ ಶ್ರೀನಿವಾಸನ್ ಅವರು ಮುಂದಿನ ವಾರ ನಡೆಯಲಿರುವ ಐಸಿಸಿ ಸಭೆಯಲ್ಲಿ ಬಿಸಿಸಿಐ ಪ್ರತಿನಿಧಿಯಾಗಿ ಭಾಗವಹಿಸುವಂತಿಲ್ಲ ಎಂದು ಸೋಮವಾರ ಸುಪ್ರೀಂ ಕೋರ್ಟ್ ಹೇಳಿದೆ.
ಬಿಸಿಸಿಐ ಕಾರ್ಯಕಾರಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಅವರಿಗೆ ಏಫ್ರಿಲ್ 24ರಂದು ನಡೆಯಲಿರುವ ಐಸಿಸಿ ಸಭೆಯಲ್ಲಿ ಭಾರತೀಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಯಾಗಿ ಭಾಗವಹಿಸಲು ಅವಕಾಶ ನೀಡಿದ್ದು, ಅವರಿಗೆ ಸಾಥ್ ನೀಡುವಂತೆ ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಪೀಠ, ಶ್ರೀನಿವಾಸನ್ ಅವರು ವ್ಯತಿರಿಕ್ತ ಹಿತಾಸಕ್ತಿ ಹೊಂದಿರುವ ಕಾರಣ ಐಸಿಸಿ ಸಭೆಯಲ್ಲಿ ಬಿಸಿಸಿಐ ಅನ್ನು ಪ್ರತಿನಿಧಿಸುವಂತಿಲ್ಲ ಎಂದು ಹೇಳಿದೆ.
2014ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಆಗ ಬಿಸಿಸಿಐ ಅಧ್ಯಕ್ಷರಾಗಿದ್ದ ಶ್ರೀನಿವಾಸನ್ ತಲೆದಂಡವಾಗಿತ್ತು. ಚೆನ್ನೈ ಸೂಪರ್‌ಕಿಂಗ್ಸ್‌ ಪದಾಧಿಕಾರಿಯಾಗಿದ್ದ ಅವರ ಅಳಿಯ ಮೇಯಪ್ಪನ್ ಅವರು ಫಿಕ್ಸಿಂಗ್‌ನಲ್ಲಿ ಭಾಗಿಯಾದ ಆರೋಪ ಎದುರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com