ಪ್ರಸಕ್ತ ಸಾಲಿನ ಸರಣಿಯಲ್ಲಿ 5 ಪಂದ್ಯಗಳನ್ನಾಡಿರುವ ಬೆಂಗಳೂರು ತಂಡ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಇಂದಿನ ಪಂದ್ಯ ಬೆಂಗಳೂರು ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಾತಾಗಿದೆ. ಅತ್ತ ಗುಜರಾತ್ ತಂಡ ಕೂಡ 4 ಪಂದ್ಯಗಳನ್ನಾಡಿದ್ದು, ಒಂದರಲ್ಲಿ ಮಾತ್ರ ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಗುಜರಾತ್ ತಂಡಕ್ಕೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.