ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 15 ರನ್ ಗಳ ರೋಚಕ ಜಯ

ಐಪಿಎಲ್ 10ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ಹೈದರಾಬಾದ್ ತಂಡ 15 ರನ್ ಗಳಿಂದ ಮಣಿಸಿತು...
ಸನ್ ರೈಸರ್ಸ್ ಹೈದರಾಬಾದ್
ಸನ್ ರೈಸರ್ಸ್ ಹೈದರಾಬಾದ್
Updated on: 
ಹೈದರಾಬಾದ್: ಐಪಿಎಲ್ 10ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ಹೈದರಾಬಾದ್ ತಂಡ 15 ರನ್ ಗಳಿಂದ ಮಣಿಸಿತು. 
ಉಪ್ಪಳದ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 4 ವಿಕೆಟ್ ಗೆ 191 ರನ್ ಪೇರಿಸಿತು. ಸ್ಫೋಟಕ ಬ್ಯಾಟ್ಸ್ ಮನ್ ಗಳಾದ ಕೇನ್ ವಿಲಿಯಮ್ಸನ್ 89, ಹಾಗೂ ಶಿಖರ್ ಧವನ್ 70 ರನ್ ಗಳ ನೆರವಿನೊಂದಿಗೆ ಹೈದರಾಬಾದ್ ಬೃಹತ್ ಮೊತ್ತ ಕಲೆಹಾಕಿತು. 
192 ರನ್ ಗಳ ಗುರಿ ಬೆನ್ನಟ್ಟಿದ್ದ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಆದರೆ ಮೊಹಮ್ಮದ್ ಸಿರಾಜ್ ಅದಕ್ಕೆ ಬ್ರೇಕ್ ಹಾಕಿದರು. ಹೀಗಾಗಿ ಡೆಲ್ಲಿ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಪೇರಿಸಿದ್ದು 15 ರನ್ ಗಳನ್ನು ಸೋಲು ಕಂಡಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com