ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತರಾದ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ ಮನ್ ಶಾಹೀದ್ ಆಫ್ರಿದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ಸಹ ಆಟಗಾರರ ಹಸ್ತಾಕ್ಷರವುಳ್ಳ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿರುವುದಕ್ಕೆ ಪಾಕಿಸ್ತಾನ ಅಭಿಮಾನಿಗಳು ಟ್ವೀಟರ್ ನಲ್ಲಿ ಭಾರೀ ಸಂತಸ ವ್ಯಕ್ತಪಡಿಸಿದ್ದಾರೆ.
ಪಾಕ್ ಅಭಿಮಾನಿಯೊಬ್ಬ ಕೊಹ್ಲಿ ನೀವು ನಮಗೆ ಅಚ್ಚುಮೆಚ್ಚಿನ ಆಟಗಾರ ಎಂದು ಟ್ವೀಟ್ ಮಾಡಿದ್ದರೆ, ಮತ್ತೊರ್ವ ನೀವು ಗೌರವಾನ್ವಿತ ಆಟಗಾರ ಎಂದೆಲ್ಲ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ.
ಜರ್ಸಿ ಮೇಲೆ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾದ ಆಟಗಾರರಾದ ಯುವರಾಜ್ ಸಿಂಗ್, ಆಶಿಶ್ ನೆಹ್ರಾ, ಜಸ್ ಪ್ರೀತ್ ಬೂಮ್ರಾ, ಸುರೇಶ್ ರೈನಾ, ಪವನ್ ನೇಗಿ, ಮಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ ಮತ್ತು ಭಾರತ ತಂಡದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಸಹಿ ಮಾಡಿದ್ದಾರೆ.
ಬೂಮ್ ಬೂಮ್ ಆಫ್ರಿದಿ ಇದೇ ಫೆಬ್ರವರಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದರು. ಕೊಹ್ಲಿ ನೀಡಿರುವ ಜರ್ಸಿಯನ್ನು ಇತ್ತೀಚೆಗೆ ಪಾಕಿಸ್ತಾನದ ಪತ್ರಕರ್ತರೊಬ್ಬರು ಟ್ವಿಟರ್ ನಲ್ಲಿ ಹಾಕಿದ್ದಾರೆ.