ರಾಣಾ, ಬಟ್ಲರ್ ಭರ್ಜರಿ ಬ್ಯಾಟಿಂಗ್: ಮುಂಬೈ ಇಂಡಿಯನ್ಸ್ ಗೆ ಸತತ 5ನೇ ಜಯ

ನಿತೀಶ್ ರಾಣಾ, ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ನೀಡಿದ 199 ರನ್ ಗಳ ಬೃಹತ್ ಮೊತ್ತವನ್ನು 15.3 ಓವರ್...
ಮುಂಬೈ ಇಂಡಿಯನ್ಸ್
ಮುಂಬೈ ಇಂಡಿಯನ್ಸ್
Updated on: 
ಇಂದೋರ್: ನಿತೀಶ್ ರಾಣಾ, ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ನೀಡಿದ 199 ರನ್ ಗಳ ಬೃಹತ್ ಮೊತ್ತವನ್ನು 15.3 ಓವರ್ ನಲ್ಲಿ ಪೇರಿಸುವ ಮೂಲಕ ಟೂರ್ನಿಯಲ್ಲಿ ಸತತ ಐದನೇ ಜಯ ದಾಖಲಿಸಿದೆ. 
ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ ಹಾಶಿಂ ಆಮ್ಲ ಶತಕ ನೆರವಿನೊಂದಿಗೆ 198 ರನ್ ಗಳನ್ನು ಕಲೆ ಹಾಕಿತು. 199 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಪರ ಜೋಸ್ ಬಟ್ಲರ್ 34 ಎಸೆತದಲ್ಲಿ 62 ಮತ್ತು ಜೋಸ್ ಬಟ್ಲರ್ 37 ಎಸೆತದಲ್ಲಿ 77 ರನ್ ಸಿಡಿಸುವ ಮೂಲಕ ತಂಡಕ್ಕೆ ಜಯ ತಂದುಕೊಟ್ಟರು. 
ಐಪಿಎಲ್ 10ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಆರು ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆಲ್ಲುವ ಮೂಲಕ 10 ಅಂಕ ಪಡೆದಿರುವ ಮುಂಬೈ ಇಂಡಿಯನ್ಸ್ ತಂಡ ಅಗ್ರಸ್ಥಾನದಲ್ಲಿದೆ. ಐದು ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 2ನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ 8 ಅಂಕ ಸಂಪಾದಿಸಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಇದ್ದರೆ ನಾಲ್ಕು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com