ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಮಿಂಚುತ್ತಿರುವ ಆರ್ ಅಶ್ವಿನ್ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 54 ರನ್ ಸಿಡಿಸುವ ಮೂಲಕ 2000 ರನ್ ಪೂರೈಸಿದರು. ಇನ್ನು ಈ ಸಾಧನೆ ಮಾಡಿದ ಭಾರತೀಯ ಕ್ರಿಕೆಟಿಗರ ಪೈಕಿ ಆರ್ ಅಶ್ವಿನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕಪಿಲ್ ದೇವ್, ಹರ್ಭಜನ್ ಸಿಂಗ್ ಮತ್ತು ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದಾರೆ.