ಗುಡ್ ಬೈ ಟು ಕ್ರಿಕೆಟ್; ನಾಗೋರ್ ಕ್ರಿಕೆಟ್ ಸಂಸ್ಥೆಗೆ ಲಲಿತ್ ಮೋದಿ ರಾಜಿನಾಮೆ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಮಾಜಿ ಅಧ್ಯಕ್ಷ, ಬಿಸಿಸಿಐನಿಂದ ಆಜೀವ ನಿಷೇಧಕ್ಕೆ ಒಳಗಾಗಿ ಸದ್ಯ ಲಂಡನ್ ನಲ್ಲಿ ನೆಲೆಸಿರುವ ಲಲಿತ್ ಮೋದಿ ರಾಜಸ್ಥಾನದ...
ಲಲಿತ್ ಮೋದಿ
ಲಲಿತ್ ಮೋದಿ
ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಮಾಜಿ ಅಧ್ಯಕ್ಷ, ಬಿಸಿಸಿಐನಿಂದ ಆಜೀವ ನಿಷೇಧಕ್ಕೆ ಒಳಗಾಗಿ ಸದ್ಯ ಲಂಡನ್ ನಲ್ಲಿ ನೆಲೆಸಿರುವ ಲಲಿತ್ ಮೋದಿ ರಾಜಸ್ಥಾನದ ನಾಗೋರ್ ಜಿಲ್ಲಾ ಕ್ರಿಕೆಟ್ ಸಂಸ್ಥೆಗೆ ರಾಜಿನಾಮೆ ನೀಡುವ ಮೂಲಕ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 
ರಾಜಸ್ಥಾನ ಕ್ರಿಕೆಟ್ ಸಂಸ್ಥೆ ಹಾಗೂ ಬಿಸಿಸಿಐನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಜೋಹ್ರಿ ಅವರಿಗೆ ಲಲಿತ್ ಮೋದಿ ರಾಜಿನಾಮೆ ಪತ್ರವನ್ನು ರವಾನಿಸಿದ್ದಾರೆ. ಪತ್ರದಲ್ಲಿ ಮೋದಿ ಮುಂದಿನ ಪೀಳಿಗೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಜತೆಗೆ ಇನ್ನು ಮುಂದೆಯಾದರೂ ರಾಜಸ್ಥಾನಕ್ಕೆ ಆರ್ಥಿಕ ನೆರವನ್ನು ನೀಡಬೇಕಾಗಿ ಕೋರಿದ್ದಾರೆ. 
2008ರ ಐಪಿಎಲ್ ಪ್ರಸಾರ ಹಕ್ಕು ವಿತರಣೆಗೆ ಸಂಬಂಧಿಸಿದಂತೆ ಅಕ್ರಮ ಹಣದ ಲೇವಾದೇವಿಯಲ್ಲಿ ಭಾಗಿಯಾದ ಆರೋಪದಡಿ ಜಾರಿ ನಿರ್ದೇಶನಾಲಯ ಮೋದಿ ವಿರುದ್ಧ ಪ್ರಕರಣ ದಾಖಲಿಸಿದ್ದು ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮೋದಿ ವಿರುದ್ಧ ಬಂಧನದ ವಾರೆಂಟ್ ಸಹ ಜಾರಿಗೊಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com