ಶ್ರೀಲಂಕಾ ಏಕದಿನ, ಟಿ20: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ರಾಹುಲ್, ಮನೀಶ್, ಯುವಿ ಔಟ್

ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಮತ್ತು ಟಿ20 ಪಂದ್ಯಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ...
ಯುವರಾಜ್ ಸಿಂಗ್-ಮನೀಶ್ ಪಾಂಡೆ
ಯುವರಾಜ್ ಸಿಂಗ್-ಮನೀಶ್ ಪಾಂಡೆ
Updated on: 
ನವದೆಹಲಿ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಮತ್ತು ಟಿ20 ಪಂದ್ಯಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ. ಇನ್ನು ಕರ್ನಾಟಕದ ಕೆಎಲ್ ರಾಹುಲ್ ಮತ್ತು ಮನೀಷ್ ಪಾಂಡ್ಯ ತಂಡದಲ್ಲಿ ಸ್ಥಾನಪಡೆದಿದ್ದು ಯುವರಾಜ್ ಸಿಂಗ್ ಗೆ ಕೊಕ್ ಕೊಡಲಾಗಿದೆ. 
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮವಾಗಿ ಆಡುತ್ತಿರುವ ಕೆಎಲ್ ರಾಹುಲ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಇತ್ತೀಚೆಗಷ್ಟೇ ನಡೆದ ತ್ರಿಕೋನ ಏಕದಿನ ಸರಣಿಯಲ್ಲಿ ಭಾರತ ಎ ತಂಡವನ್ನು ಮುನ್ನಡೆಸಿದ್ದ ಮನೀಶ್ ಪಾಂಡೆ ಅದ್ಭುತ ಪ್ರದರ್ಶನ ನೀಡಿದ್ದರು. ಇದರಿಂದಾಗಿ ಲಂಕಾ ವಿರುದ್ಧದ ಸೀಮಿತ ಓವರ್ ಗಳ ಪಂದ್ಯಗಳಿಗೆ ಭಾರತ ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ. 
ಆಗಸ್ಟ್ 20 ರಿಂದ ಐದು ಏಕದಿನ ಪಂದ್ಯಗಳ ಸರಣಿ ಆರಂಭಗೊಳ್ಳಲಿದೆ. ಇನ್ನು ಸೆಪ್ಟೆಂಬರ್ 6ಕ್ಕೆ ಏಕೈಕ ಟಿ20 ಪಂದ್ಯ ನಡೆಯಲಿದೆ. 
ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಮನೀಶ್ ಪಾಂಡೆ, ಅಜಿಂಕ್ಯ ರಹಾನೆ, ಕೇದಾರ್ ಜಾಧವ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ ದೀಪ್ ಯಾದವ್, ಯಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಸಾರ್ದೂಲ್ ಠಾಕೂರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com