85 ವರ್ಷದ ಭಾರತದ ಟೆಸ್ಟ್ ಇತಿಹಾಸದಲ್ಲಿ ಯಾವ ನಾಯಕನು ಮಾಡದ ಸಾಧನೆ ಕೊಹ್ಲಿ ಮಾಡಿದ್ದಾರೆ!

ಟೀಂ ಇಂಡಿಯಾ 1932ರಲ್ಲಿ ಇಂಗ್ಲೆಂಡ್ ಜತೆ ಮೊದಲ ಟೆಸ್ಟ್ ಪಂದ್ಯವಾಡಿತ್ತು. ಅಲ್ಲಿಂದ ಇಲ್ಲಿಯವರೆಗೂ ಅಂದರೆ ಸುಮಾರು 85 ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ನ್ನು ಭಾರತ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ನವದೆಹಲಿ: ಟೀಂ ಇಂಡಿಯಾ 1932ರಲ್ಲಿ ಇಂಗ್ಲೆಂಡ್ ಜತೆ ಮೊದಲ ಟೆಸ್ಟ್ ಪಂದ್ಯವಾಡಿತ್ತು. ಅಲ್ಲಿಂದ ಇಲ್ಲಿಯವರೆಗೂ ಅಂದರೆ ಸುಮಾರು 85 ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ನ್ನು ಭಾರತ ಆಡುತ್ತಿದೆ. ಇನ್ನು ಹಲವು ಪ್ರತಿಷ್ಠಿತ ಸರಣಿಗಳನ್ನು ಕೈವಶ ಮಾಡಿಕೊಂಡಿದೆ. ಜತೆಗೆ ತಂಡವನ್ನು 33 ನಾಯಕರು ಮುನ್ನಡೆಸಿದ್ದು ಅವರು ಯಾರು ಮಾಡದ ಸಾಧನೆಯನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಡಿದ್ದಾರೆ. 
ವಿದೇಶಿ ನೆಲದಲ್ಲಿ ಟೀಂ ಇಂಡಿಯಾ ಒಟ್ಟು 78 ಟೆಸ್ಟ್ ಸರಣಿಗಳನ್ನು ಆಡಿದ್ದು ಅದರಲ್ಲಿ 18 ಟೆಸ್ಟ್ ಸರಣಿಗಳನ್ನು ಕೈವಶ ಮಾಡಿಕೊಂಡಿದೆ. ಆದರೆ ಇಲ್ಲಿಯವರೆಗೂ ಕಳೆದ 85 ವರ್ಷಗಳಿಂದ ಭಾರತ ಟೆಸ್ಟ್ ಕ್ರಿಕೆಟ್ ನಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿರಲಿಲ್ಲ. ಮೊದಲ ಬಾರಿಗೆ ಶ್ರೀಲಂಕಾ ತಂಡವನ್ನು 3-0 ಅಂತರದಿಂದ ವೈಟ್ ವಾಷ್ ಮಾಡುವ ಮೂಲಕ ನಾಯಕ ವಿರಾಟ್ ಕೊಹ್ಲಿ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. 
ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಇಲ್ಲಿಯವರೆಗೂ 29 ಟೆಸ್ಟ್ ಪಂದ್ಯಗಳಲ್ಲಿ 19ರಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಏಕದಿನ ವಿಶ್ವಕಪ್ ಗೆಲ್ಲಿಸಿಕೊಟ್ಟ ಖ್ಯಾತಿಯ ಎಂಎಸ್ ಧೋನಿ 60 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು ಅವುಗಳಲ್ಲಿ 27 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಸೌರವ್ ಗಂಗೂಲಿ ನಾಯಕತ್ವದಲ್ಲಿ 49 ಟೆಸ್ಟ್ ಪಂದ್ಯಗಳ ಪೈಕಿ 21ರಲ್ಲಿ ಗೆಲುವು ಸಾಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com