ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ನ ಮೂರು ಮಾದರಿಗಳಲ್ಲೂ ಉತ್ತಮವಾಗಿ ಆಡುತ್ತಿದ್ದು ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಐದು ಏಕದಿನ ಪಂದ್ಯಗಳನ್ನು ಆಡಲಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಉತ್ತಮವಾಗಿ ಆಡಿದರೆ ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಅವರಿಗೂ 12 ಪಂದ್ಯಗಳ ಮುನ್ನಡೆ ಪಡೆಯುವ ಅವಕಾಶವಿದೆ.
ಪ್ರಸ್ತುತ ವಿರಾಟ್ ಕೊಹ್ಲಿ 865 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಡೇವಿಡ್ ವಾರ್ನರ್ 861 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಮಹೇಂದ್ರ ಸಿಂಗ್ ಧೋನಿ, ಶಿಖರ್ ಧವನ್, ರೋಹಿತ್ ಶರ್ಮಾ ಕ್ರಮವಾಗಿ 12, 13, 14ನೇ ಸ್ಥಾನಗಳನ್ನು ಪಡೆದಿದ್ದಾರೆ.
ಕ್ರಿಕೆಟ್ ಏಕದಿನ ಬೌಲಿಂಗ್ ವಿಭಾಗದ ಟಾಸ್ 10ರಲ್ಲಿ ಭಾರತದ ಯಾವುದೇ ಆಟಗಾರ ಸ್ಥಾನಪಡೆದಿಲ್ಲ. ಆದರೆ ಭುವನೇಶ್ವರ್ ಕುಮಾರ್ ಮಾತ್ರ 13ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಇನ್ನು ಆಸ್ಟ್ರೇಲಿಯಾದ ಜೋಶ್ ಹಜಲ್ ವುಡ್ 732 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.