ಲಂಕಾದಲ್ಲಿ ಗಿಡ ನೆಡುವ ಮೂಲಕ ಎಲ್ಲರ ಹೃದಯ ಗೆದ್ದ ವಿರಾಟ್-ಅನುಷ್ಕಾ

ಏಕದಿನ ಸರಣಿ ಹಿನ್ನಲೆ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಗೆಳತಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಗಿಡ ನೆಡುವ...
ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ
ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ
Updated on: 
ಡಂಬುಲ್ಲಾ: ಏಕದಿನ ಸರಣಿ ಹಿನ್ನಲೆ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಗೆಳತಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. 
ಲಂಕಾದಲ್ಲಿ ಡೇಟಿಂಗ್ ನಡೆಸುತ್ತಿರುವ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಶನಿವಾರ ಕ್ಯಾಂಡಿಯಲ್ಲಿ ಕೆಲ ಸ್ನೇಹಿತರೊಂದಿಗೆ ಕಾಲ ಕಳೆದರು. ನಂತರ ಜೋಡಿ ಗಿಡವೊಂದನ್ನು ನೆಟ್ಟಿದ್ದು ಈ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. 
ವೆಸ್ಟ್ ಇಂಡೀಸ್ ಸರಣಿ ಬಳಿಕ ಇಬ್ಬರು ಅಮೆರಿಕದಲ್ಲಿ ಕೆಲ ದಿನಗಳ ಕಾಲ ಸಮಯ ಕಳೆದಿದ್ದರು. ಇದೀಗ ಶ್ರೀಲಂಕಾದಲ್ಲೂ ಇಬ್ಬರೂ ಒಟ್ಟಿಗೆ ಓಡಾಡುತ್ತಿದ್ದಾರೆ. 
ಇನ್ನು ನಿನ್ನೆ ಲಂಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com