ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ಕ್ರಿಕೆಟ್ ಬದುಕಿನಲ್ಲಿ ಕೆಲವೊಂದು ದಾಖಲೆಗಳನ್ನು ಸರಿಗಟ್ಟಿ ಕೆಲವೊಂದು ನೂತನ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಗರಿಷ್ಠ ಸ್ಟಂಪಿಂಗ್ ಮಾಡಿರುವ ವಿಕೆಟ್ ಕೀಪರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕುಮಾರ ಸಂಗಕ್ಕಾರರ ದಾಖಲೆಯನ್ನು ಎಂಎಸ್ ಧೋನಿ ಸರಿಗಟ್ಟಿದ್ದಾರೆ. ಶ್ರೀಲಂಕಾದ ಆರಂಭಿಕ ಆಟಗಾರ ಗುಣತಿಲಕ ಅವರನ್ನು ಸ್ಟಂಪ್ ಮಾಡುವ ಮೂಲಕ ಧೋನಿ 99ನೇ ಸ್ಟಂಪಿಂಗ್ ಮಾಡಿದ್ದಾರೆ.
ಸಂಗಕ್ಕಾರ ಒಟ್ಟಾರೆ 404 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ ಧೋನಿ ಕೇವಲ 298 ಪಂದ್ಯಗಳಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ. ಇನ್ನೊಂದು ಸ್ಟಂಪಿಂಗ್ ಪೂರೈಸಿದಲ್ಲಿ ಧೋನಿ 100 ಸ್ಟಂಪಿಂಗ್ ನೊಂದಿಗೆ ವಿಶ್ವ ದಾಖಲೆ ಬರೆಯಲಿದ್ದಾರೆ.