3ನೇ ಟೆಸ್ಟ್ ಪಂದ್ಯದಲ್ಲೂ ಹಲವು ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. 
ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ 20ನೇ ಶತಕ ಸಿಡಿಸುವ ಮೂಲಕ ಮತ್ತೊಂದು ಮೈಲಿಗಲ್ಲು ದಾಖಲಿಸಿದ್ದಾರೆ. ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ 5 ಸಾವಿರ ರನ್ ಪೂರೈಸಿದ ಭಾರತದ 11ನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 
ಇನ್ನು ವೇಗವಾಗಿ 5 ಸಾವಿರ ರನ್ ಪೂರೈಸಿದ ಜಗತ್ತಿನ ನಾಲ್ಕನೇ ಆಟಗಾರ ಎಂಬ ಖ್ಯಾತಿ ಪಡೆದಿದ್ದಾರೆ. 5 ಸಾವಿರ ರನ್ ಪೂರೈಸಲು ಕೊಹ್ಲಿ 105 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದಾರೆ. ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್(95), ವೀರೇಂದ್ರ ಸೆಹ್ವಾಗ್(99) ಮತ್ತು ಸಚಿನ್ ತೆಂಡೂಲ್ಕರ್(103) ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com