ಮುಂದಿನ ವರ್ಷ ಟೀಂ ಇಂಡಿಯಾಗೆ ಹಗಲು-ರಾತ್ರಿ ಟೆಸ್ಟ್?

ಟೆಸ್ಟ್ ರ್ಯಾಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಮುಂದಿನ ವರ್ಷ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು ಎಲ್ಲವೂ ಅಂದುಕೊಂಡಂತೆ ನಡೆದರೆ ಟೀಂ...
ಕ್ರಿಕೆಟ್ ಮೈದಾನ
ಕ್ರಿಕೆಟ್ ಮೈದಾನ
ಅಡಿಲೇಡ್: ಟೆಸ್ಟ್ ರ್ಯಾಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಮುಂದಿನ ವರ್ಷ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು ಎಲ್ಲವೂ ಅಂದುಕೊಂಡಂತೆ ನಡೆದರೆ ಟೀಂ ಇಂಡಿಯಾ ತನ್ನ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಲಿದೆ. 
ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮುಂದಿನ ವರ್ಷ ಟೆಸ್ಟ್ ಸರಣಿ ಆಡಲಿದೆ. ಈ ವೇಳೆ ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಡುವ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ಜೇಮ್ಸ್ ಸಥರ್ ಲೆಂಡ್ ಪ್ರತಿಕ್ರಿಯಿಸಿದ್ದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಜತೆ ಮಾತುಕತೆ ನಡೆಸಿದ್ದೇವೆ ಎಂದರು. 
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ, ಪಂದ್ಯಗಳ ಆಯೋಜನೆ ಆತಿಥೇಯ ಕ್ರಿಕೆಟ್ ಮಂಡಳಿಗೆ ಬಿಟ್ಟ ವಿಚಾರವಾಗಿರುವುದರಿಂದ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಟೆಸ್ಟ್ ಸರಣಿಯನ್ನು ಹಗಲು-ರಾತ್ರಿ ನಡೆಸಲು ಮುಂದಾಗಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com