ನವದೆಹಲಿ: ಪ್ರವಾಸಿ ಶ್ರೀಲಂಕಾ ವಿರುದ್ದದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಲಂಕಾಗೆ ಗೆಲ್ಲಲು 410 ರನ್ ಗಳ ಗುರಿ ನೀಡಿದೆ.
ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 246 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಲಂಕಾಗೆ 410 ರನ್ ಗಳ ಗುರಿ ನೀಡಿದೆ.
ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಮುರಳಿ ವಿಜಯ್ 9, ಶಿಖರ್ ಧವನ್ 67, ರಹಾನೆ 10, ಪೂಜಾರ 49, ವಿರಾಟ್ ಕೊಹ್ಲಿ 50 ಹಾಗೂ ರೋಹಿತ್ ಶರ್ಮಾ ಅಜೇಯ 50 ರನ್ ಗಳಿಸಿದ್ದಾರೆ.
ಮೊದಲ ಇನ್ನಿಂಗ್ಸ್ ನಲ್ಲಿ ಲಂಕಾ 373 ರನ್ ಗಳಿಗೆ ಸರ್ವ ಪತನ ಕಂಡಿತು. ಇದರೊಂದಿಗೆ ಭಾರತ 163 ರನ್ ಗಳ ಮುನ್ನಡೆ ಪಡೆದಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 5 ವಿಕೆಟ್ ನಷ್ಟಕ್ಕೆ 246 ರನ್ ಪೇರಿಸಿ 2ನೇ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿದೆ.