ಕ್ರಿಕೆಟ್

ಲಂಕಾ ವಿರುದ್ಧದ ಸೋಲಿನ ಸೇಡನ್ನು ಮೊಹಾಲಿಯಲ್ಲಿ ತೀರಿಸಿಕೊಳ್ಳುತ್ತಾ ಭಾರತ!

ಲಂಕಾ ವಿರುದ್ಧದ ಸೋಲಿನ ಸೇಡನ್ನು ಮೊಹಾಲಿಯಲ್ಲಿ ತೀರಿಸಿಕೊಳ್ಳುತ್ತಾ ಭಾರತ!
ಟೀಂ ಇಂಡಿಯಾ
Published On :
ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದ್ದು ಇದಕ್ಕೆ ಮೊಹಾಲಿಯಲ್ಲಿ ತಂಡ ಸೇಡು ತೀರಿಸಿಕೊಳ್ಳಲು ಬಯಸಿದೆ. 
ಧರ್ಮಶಾಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿದ್ದ ಟೀಂ ಇಂಡಿಯಾಗೆ ಲಂಕಾ ವಿರುದ್ಧ ಎರಡನೇ ಪಂದ್ಯ ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ. ಇನ್ನು ಪಂದ್ಯದ ಸೋಲಿನಿಂದ ಕಂಗೆಟ್ಟಿರುವ ತಂಡಕ್ಕೆ ಆರಂಭಿಕರ ವೈಫಲ್ಯವು ದೊಡ್ಡ ಸಮಸ್ಯೆಯಾಗಿ ಕಾಣಿಸುತ್ತಿದೆ. 
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ಪ್ರದರ್ಶನ ದೊಡ್ಡ ಪೆಟ್ಟು ನೀಡಿದೆ. 2019ರ ಏಕದಿನ ವಿಶ್ವಕಪ್ ಗೆ ತಯಾರಿ ನಡೆಯುತ್ತಿರುವ ಮಧ್ಯೆ ಅನುಭವಿ ಆಟಗಾರರು ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿರುವುದು ಚಿಂತೆಗೆ ಗುರಿ ಮಾಡಿದೆ. ಆದರೆ ಮೊಹಾಲಿ ಪಂದ್ಯದಲ್ಲಿ ಲಂಕಾಗೆ ತಿರುಗೇಟು ನೀಡುವ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಟೀಂ ಇಂಡಿಯಾ. 
ಸ್ಫೋಟಕ ಬ್ಯಾಟ್ಸ್ ಮನ್ ಗಳಾದ ಶಿಖರ್ ಧವನ್, ರೋಹಿತ್ ಶರ್ಮಾ, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್ ರಂತ ಅನುಭವಿ ಆಟಗಾರರಿದ್ದರು ಧರ್ಮಶಾಲಾ ಪಂದ್ಯದಲ್ಲಿ ತಂಡ ಸ್ಫರ್ಧಾತ್ಮಕ ಮೊತ್ತ ಪೇರಿಸಲು ಸಾಧ್ಯವಾಗಿರಲಿಲ್ಲ. ಇನ್ನು ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎಂದಿನಂತೆ ತನ್ನ ಆಟವನ್ನು ಪ್ರದರ್ಶಿಸಿದ್ದಾರೆ. ಎಂತಹ ಒತ್ತಡದ ಪರಿಸ್ಥಿತಿಯಲ್ಲೂ ತಾನು ಸ್ಥಿರವಾಗಿ ಆಡಬಲ್ಲೆ ಎಂಬುದನ್ನು ನಿರೂಪಿಸಿದ್ದಾರೆ. 
ಮೊಹಾಲಿಯಲ್ಲಿ ನಡೆಯುತ್ತಿರುವ ನಾಳಿನ ಪಂದ್ಯಕ್ಕೆ ಸದ್ಯ ಟೀಂ ಇಂಡಿಯಾ ಭಾರೀ ಕಸರತ್ತು ನಡೆಸುತ್ತಿದ್ದು ಮೊದಲ ಪಂದ್ಯದ ಸೋಲಿನ ಮುಜುಗರ ತೀರಿಸಿಕೊಳ್ಳಲು ಎದುರು ನೋಡುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.