2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ, 2023ರ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ!

ಬಹು ನಿರೀಕ್ಷಿತ 2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿ ಹಾಗೂ 2023ರ ವಿಶ್ವಕಪ್ ಕ್ರಿಕೆಟ್ ಟೂರ್ನಿಗಳು ಭಾರತದಲ್ಲಿ ಆಯೋಜನೆಗೊಳ್ಳಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಬಹು ನಿರೀಕ್ಷಿತ 2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿ ಹಾಗೂ 2023ರ ವಿಶ್ವಕಪ್ ಕ್ರಿಕೆಟ್ ಟೂರ್ನಿಗಳು ಭಾರತದಲ್ಲಿ ಆಯೋಜನೆಗೊಳ್ಳಲಿದೆ.
ನಿನ್ನೆ ಮುಂಬೈನಲ್ಲಿ ನಡೆದಿ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ಪಂದ್ಯಗಳು ನಡೆಯುವ ಸಂಭಾವ್ಯ ಕ್ರೀಡಾಂಗಣಗಳ ಕುರಿತು ಚರ್ಚೆ ನಡೆಸಲಾಗಿದ್ದು, ಸಭೆ ಬಳಿಕ ಈ ಬಗ್ಗೆ ಸ್ವತಃ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ  (ಬಿಸಿಸಿಐ) ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಹಾಗೂ 2023ರ ವಿಶ್ವಕಪ್ ಕ್ರಿಕೆಟ್ ಗೆ ಭಾರತ ಆತಿಥ್ಯವಹಿಸಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಈ ಹಿಂದೆ ದುಬೈನಲ್ಲಿ ನಡೆದ  ಐಸಿಸಿ ಸಭೆಯಲ್ಲೇ ಚರ್ಚಿಸಲಾಗಿತ್ತಾದರೂ. ಇದೀಗ ಬಿಸಿಸಿಐ ಅಧಿಕಾರಿಗಳು ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಆ ಮೂಲಕ ಇದೇ ಮೊದಲ ಬಾರಿಗೆ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ  ಆಯೋಜನೆಯಾಗಲಿದೆ.
ಈ ಹಿಂದೆ 1987, 1996 ಮತ್ತು 2011ರಲ್ಲಿ ಮೂರು ಭಾರಿ ಭಾರತದಲ್ಲಿ ವಿಶ್ವಕಪ್ ಟೂರ್ನಿ ಆಯೋಜನೆಯಾಗಿತ್ತಾದರೂ ಪೂರ್ಣ ಪ್ರಮಾಣದಲ್ಲಿ ಭಾರತದಲ್ಲೇ ಆಯೋಜನೆಯಾಗಿರಲಿಲ್ಲ. ಭಾರತದ ನೆರೆಯ ದೇಶಗಳಾದ ಪಾಕಿಸ್ತಾನ,  ಶ್ರೀಲಂಕಾ, ಬಾಂಗ್ಲಾದೇಶಗಳೊಂದಿಗೆ ಸೇರಿ ಭಾರತ ಟೂರ್ನಿ ಆಯೋಜನೆ ಮಾಡಲಾಗಿತ್ತು. ಆದರೆ ಇದೇ ಮೊದಲ ಬಾರಿಗೆ ಭಾರತ ತಂಡ ಸಂಪೂರ್ಣ ಪ್ರಮಾಣದ ವಿಶ್ವಕಪ್ ಟೂರ್ನಿಯನ್ನು ತನ್ನ ನೆಲದಲ್ಲೇ ಆಯೋಜನೆ  ಮಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com