ಆರಂಭಿಕರಾದ ಶಿಖರ್ ಧವನ್ ಉತ್ತಮ ಆರಂಭ ಒದಗಿಸಿಕೊಟ್ಟರು 67 ಎಸೆತದಲ್ಲಿ 68 ರನ್ ಬಾರಿಸಿ ಔಟಾದರು. ನಂತರ ಜತೆಯಾದ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ 150ಕ್ಕೂ ರನ್ ಜತೆಯಾಟ ನೀಡಿದರು. ಭರ್ಜರಿಯಾಗಿ ಆಡುತ್ತಿದ್ದ ಶ್ರೇಯಸ್ ಅಯ್ಯರ್ 88 ರನ್ ಗಳಿಸಿದ್ದಾಗ ಔಟ್ ಆಗಿ ಪೆವಿಲಿಯನ್ ಸೇರಿದರು. ನಂತರ ಬಂದ ಮಾಜಿ ನಾಯಕ ಎಂಎಸ್ ಧೋನಿ 7 ರನ್ ಗಳಿಸಿ ಔಟಾದರೆ ಹಾರ್ದಿಕ್ ಪಾಂಡ್ಯ 8 ರನ್ ಗಳಿಸಿ ಔಟಾದರು. ಈ ಮಧ್ಯೆ ಸ್ಫೋಟಕ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ 153 ಎಸೆತದಲ್ಲಿ 12 ಸಿಕ್ಸರ್, 13 ಬೌಂಡರಿ ಸೇರಿದಂತೆ ಅಜೇಯ 208 ರನ್ ಸಿಡಿಸಿದರು.