ಏಕದಿನ ರ್ಯಾಂಕಿಂಗ್: ಟಾಪ್ 5ನೇ ಸ್ಥಾನಕ್ಕೇರಿದ ರೋಹಿತ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ತಮ್ಮ ಕ್ರಿಕೆಟ್ ಬದುಕಿನಲ್ಲಿ ಅತ್ಯುತ್ತಮ ಶ್ರೇಯಾಂಕದ ಸಾಧನೆ ಮಾಡಿದ್ದಾರೆ...
ರೋಹಿತ್ ಶರ್ಮಾ
ರೋಹಿತ್ ಶರ್ಮಾ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ತಮ್ಮ ಕ್ರಿಕೆಟ್ ಬದುಕಿನಲ್ಲಿ ಅತ್ಯುತ್ತಮ ಶ್ರೇಯಾಂಕದ ಸಾಧನೆ ಮಾಡಿದ್ದಾರೆ. 
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ರೋಹಿತ್ ಶರ್ಮಾ 5ನೇ ಸ್ಥಾನಕ್ಕೇರಿದ್ದಾರೆ. ಶ್ರೀಲಂಕಾ ವಿರುದ್ಧದ ದ್ವಿಶತಕ ಬಾರಿಸಿದ್ದ ರೋಹಿತ್ ಶರ್ಮಾಗೆ ರ್ಯಾಂಕಿಂಗ್ ಪಟ್ಟಿಯಲ್ಲಿ ಟಾಪ್ 10ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಯಿತು. 
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು ಎಬಿಡಿ ವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ ಮೂರನೇ ಹಾಗೂ ಬಾಬರ್ ಅಜಂ ನಾಲ್ಕನೇ ಸ್ಥಾನದಲ್ಲಿದ್ದಾರೆ. 
ಬೌಲಿಂಗ್ ವಿಭಾಗದಲ್ಲಿ ಪಾಕಿಸ್ತಾನದ ಹಸನ್ ಅಲಿ ಅಗ್ರಸ್ಥಾನದಲ್ಲಿದ್ದರೆ ದಕ್ಷಿಣ ಆಫ್ರಿಕಾದ ಇಮ್ರಾನ್ ತಹೀರ್ ಎರಡನೇ ಸ್ಥಾನ ಹಾಗೂ ಭಾರತ ಜಸ್ ಪ್ರೀತ್ ಬುಮ್ರಾ 3ನೇ ಸ್ಥಾನ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com