2018 ಜನವರಿ 27ರಿಂದ ಬೆಂಗಳೂರಿನಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ಆರಂಭ!

ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ನ 11ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಮುಂಬರುವ ಜನವರಿ 27ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ನ 11ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಮುಂಬರುವ ಜನವರಿ 27ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಜನವರಿ 27 ಮತ್ತು 28ರಂದು ಐಪಿಎಲ್ ಹರಾಜ ಪ್ರಕ್ರಿಯೆ ನಡೆಯಲಿದ್ದು, ಈ ಹಿಂದಿನಂತೆಯೇ ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೆ ನಡೆಸಲು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದೆ. ಅಲ್ಲದೆ ಫ್ರಾಂಚೈಸಿ ತಂಡಗಳ ಭಾವನೆ ಕೂಡ  ಬೆಂಗಳೂರಿನಲ್ಲೇ ಹರಾಜು ಪ್ರಕ್ರಿಯೆ ನಡೆಯಬೇಕು ಎಂದಾಗಿದ್ದು, ಇದೇ ಕಾರಣಕ್ಕೆ ಬೆಂಗಳೂರಿನಲ್ಲಿಯೇ ಹರಾಜು ಪ್ರಕ್ರಿಯೆ ನಡೆಸಲು ಉದ್ದೇಶಿಸಲಾಗಿದೆ ಎಂದು ಐಪಿಎಲ್ ಆಡಳಿತ ಮಂಡಳಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.
ಇನ್ನು ಈ ಬಾರಿ ಹರಾಜು ಪ್ರಕ್ರಿಯೆಯಲ್ಲಿ ತಂಡಗಳ ಬಜೆಟ್ ಅನ್ನು 66 ಕೋಟಿ ರು.ಗಳಿಂದ 80 ಕೋಟಿ ರು.ಗಳಿಗೆ ಏರಿಕೆ ಮಾಡಲಾಗಿದ್ದು, ತಂಡಗಳಿಗೆ ಇದರಿಂದ ಹೆಚ್ಚುವರಿ ಆಟಗಾರ ಖರೀದಿಗೆ ಮತ್ತು ಉತ್ತಮ ಆಟಗಾರನ ಮೇಲೆ  ಹೆಚ್ಚು ಹಣ ಹೂಡಲು ನೆರವಾಗುತ್ತದೆ ಎನ್ನಲಾಗಿದೆ. ಅಂತೆಯೇ ಈ ಬಾರಿಯೂ ಪ್ರತೀ ತಂಡಗಳು ಎಲ್ಲ ಐದೂ ಆಟಗಾರರನ್ನೂ ಮುಂದುವರೆಸಿಕೊಳ್ಳಲು ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com