'ಸ್ಫೂರ್ತಿದಾಯಕ' ಧೋನಿ ಈಗಲೂ ಮ್ಯಾಚ್ ವಿನ್ನರ್: ಕೆಎಲ್ ರಾಹುಲ್

ಫಾರ್ಮ್ ಕಳೆದುಕೊಂಡಿರುವ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಏಕದಿನ ಮತ್ತು ಟಿ 20 ಪಂದ್ಯಗಳಿಂದಲೂ....
ಕೆಎಲ್ ರಾಹುಲ್
ಕೆಎಲ್ ರಾಹುಲ್
Updated on: 
ಕಟಕ್: ಫಾರ್ಮ್ ಕಳೆದುಕೊಂಡಿರುವ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಏಕದಿನ ಮತ್ತು ಟಿ 20 ಪಂದ್ಯಗಳಿಂದಲೂ ನಿವೃತ್ತಿ ಪಡೆಯಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ನಿವೃತ್ತಿಯ ಅಂಚಿನಲ್ಲಿರುವ ಧೋನಿ ಈಗಲೂ ಮ್ಯಾಚ್ ವಿನ್ನರ್ ಆಗಿದ್ದು, ಟೀಂ ಇಂಡಿಯಾಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ಆರಂಭಿಕ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ಅವರು ಹೇಳಿದ್ದಾರೆ.
ನಿನ್ನೆ ಶ್ರೀಲಂಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಧೋನಿ 22 ಎಸೆತಗಳಲ್ಲಿ ಬರೋಬ್ಬರಿ 39ರನ್‌ ಸಿಡಿಸುವ ಮೂಲಕ ಭಾರತ ತಂಡ 93 ರನ್ ಗಳ ಭರ್ಜರಿ ಗೆಲುವು ಸಾಧಿಸಲು ನೆರವಾಗಿದ್ದರು. 
ಪಂದ್ಯ ಗೆದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ನೀವು ಯಾವ ಫಾರ್ಮ್‌‌ ಕುರಿತು ಕೇಳುತ್ತಿದ್ದೀರಿ ಎಂಬುದು ನನಗೆ ಗೊತ್ತಿಲ್ಲ. ನಾನು ಮೈದಾನದಲ್ಲಿ ಪ್ರತಿ ಬಾರಿ ಧೋನಿ ಅವರೊಂದಿಗೆ ಆಟವಾಡುತ್ತಿರುವಾಗ ಅವರು ರನ್‌‌ ಪಡೆಯಲು ಯತ್ನಿಸುತ್ತಾರೆ. ಧೋನಿ ಡ್ರೆಸ್ಸಿಂಗ್‌‌‌ ರೂಂನಲ್ಲಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ ಎಂದಿದ್ದಾರೆ.
ಕಟಕ್'ನ ಬಾರಬತ್ತಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ಕೆ.ಎಲ್. ರಾಹುಲ್ 48 ಎಸೆತಗಳನ್ನು ಎದುರಿಸಿ, 7 ಬೌಂಡರಿ ಹಾಗೂ 1 ಸಿಕ್ಸ್'ರ್'ನೊಂದಿಗೆ 61 ರನ್ ಗಳಿಸುವುದರೊಂದಿಗೆ ವೃತ್ತಿ ಜೀವನದ 2ನೇ ಅರ್ಧ ಶತಕ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com