ವಿರಾಟ್ ಕೊಹ್ಲಿಗಿಂತ ಸ್ಟೀವ್ ಸ್ಮಿತ್ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್‌ಮನ್: ಶೇನ್ ವಾರ್ನ್

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗಿಂತ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್‌ಮನ್ ಎಂದು ಆಸ್ಟ್ರೇಲಿಯಾದ ಮಾಜಿ...
ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್
ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್
Updated on: 
ಮೆಲ್ಬೋರ್ನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗಿಂತ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್‌ಮನ್ ಎಂದು ಆಸ್ಟ್ರೇಲಿಯಾದ ಮಾಜಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಹೇಳಿದ್ದಾರೆ. 
ಶೇನ್ ವಾರ್ನ್ ಟಾಪ್ 11 ಟೆಸ್ಟ್ ಬ್ಯಾಟ್ಸ್ ಮನ್ ಗಳ ಪಟ್ಟಿ ರೆಡಿ ಮಾಡಿದ್ದು ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಸ್ಟೀವ್ ಸ್ಮಿತ್ ಹೆಸರು ಇದೆ. ಇನ್ನು ಸ್ಟೀವ್ ಸ್ಮಿತ್ ಜಗತ್ತಿನ ಶ್ರೇಷ್ಠ ಟೆಸ್ಟ್ ಬ್ಯಾಟ್ಸ್ ಮನ್ ಎಂದು ಪತ್ರಿಕೆಯೊಂದರ ಕಾಲಂನಲ್ಲಿ ಬರೆದಿದ್ದಾರೆ. 
ಕ್ರಿಕೆಟ್ ನ ಮೂರು ಮಾದರಿಯಲ್ಲೂ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಐದು ದಿನಗಳ ಟೆಸ್ಟ್ ನಲ್ಲಿ ಮಾತ್ರ ಸ್ಟೀವ್ ಸ್ಮಿತ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕೊಹ್ಲಿ ಬ್ಯಾಟಿಂಗ್ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ. ಭಾರತದ ನಾಯಕನ ಅದ್ಭುತ ವೃತ್ತಿಜೀವನದಲ್ಲಿ ಇಂಗ್ಲೆಂಡ್ ನಲ್ಲಿ ಮಾತ್ರ ಉತ್ತಮ ರನ್ ಕಲೆ ಹಾಕುವಲ್ಲಿ ಸೋತಿದ್ದಾರೆ. 
2014ರ ಇಂಗ್ಲೆಂಡ್ ಪ್ರವಾಸದಲ್ಲಿ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಆದರೆ ಸ್ಟೀವ್ ಸ್ಮಿತ್ ಮಾತ್ರ ಇಂಗ್ಲೆಂಡ್ ನಲ್ಲಿ ನಡೆದ ಆಶಸ್ ಸರಣಿಯಲ್ಲಿ ಶತಕಗಳನ್ನು ಸಿಡಿಸಿದ್ದು 43.13ರ ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದಾರೆ ಎಂದರು. ಈ ಅಂಕಿ ಅಂಶಗಳಿಂದಲೇ ಕೊಹ್ಲಿಗಿಂತ ಸ್ಮಿತ್ ಶ್ರೇಷ್ಠರು ಎಂದು ವಾರ್ನ್ ಅಭಿಪ್ರಾಯಕ್ಕೆ ಬಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com