ಮುಂಬೈ: ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಗೆಲ್ಲಲು 136 ರನ್ ಗಳ ಗುರಿ ಪಡೆದಿದೆ.
ಮುಂಬೈನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಟೀಂ ಇಂಡಿಯಾ ಬೌಲರ್ ಗಳ ಮಾರಕ ದಾಳಿಯಿಂದಾಗಿ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು 136 ರನ್ ಗಳ ಗುರಿ ಪಡೆದಿದೆ.
ಶ್ರೀಲಂಕಾ ಪರ ಸಮರವಿಕ್ರಮ 21, ಗುಣರತ್ನೆ 36, ಶನಕ 17 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ ಹಾಗೂ ಉನಾದ್ಕಟ್ ತಲಾ 2 ವಿಕೆಟ್ ಪಡೆದರೇ, ಸುಂದರ್, ಸಿರಾಜ್ ಹಾಗೂ ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದಿದ್ದಾರೆ.
ಲಂಕಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಭಾರತ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.