ನವದೆಹಲಿ: ಟೀಂ ಇಂಡಿಯಾದ ಯುವ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ವಿನೂತನ ವಿಶ್ವ ದಾಖಲೆ ಬರೆಯಲು ಮುಂದಾಗಿದ್ದಾರೆ.
ಪ್ರವಾಸಿ ಶ್ರೀಲಂಕಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಯಜುವೇಂದ್ರ ಚಹಾಲ್ ಒಂದು ವಿಕೆಟ್ ಪಡೆದರೇ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ದಾಖಲೆಯನ್ನು ಮುರಿಯುತ್ತಾರೆ.
2016ರಲ್ಲಿ ಅಶ್ವಿನ್ 23 ವಿಕೆಟ್ ಪಡೆದು ವರ್ಷ ಒಂದರಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದೀಗ ಚಹಾಲ್ 11 ಪಂದ್ಯಗಳಲ್ಲಿ 23 ವಿಕೆಟ್ ಪಡೆದು ಅಶ್ವಿನ್ ದಾಖಲೆಯನ್ನು ಸಮಗಟ್ಟಿದ್ದಾರೆ.
ಟಿ20 ಪಂದ್ಯದಲ್ಲಿ ವರ್ಷ ಒಂದರಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಪಾಕಿಸ್ತಾನದ ಆಫ್ ಸ್ಪಿನ್ನರ್ ಸಯೀದ್ ಅಜ್ಮಲ್(25 ವಿಕೆಟ್) ಹೆಸರಿನಲ್ಲಿದೆ. ಅಜ್ಮಲ್ 2012ರಲ್ಲಿ ಟಿ20ಯಲ್ಲಿ 25 ವಿಕೆಟ್ ಪಡೆದಿದ್ದರು. ಇದೀಗ ಯಜುವೇಂದ್ರ ಚಹಾಲ್ 3 ವಿಕೆಟ್ ಪಡೆದರೇ ಅಜ್ಮಲ್ ದಾಖಲೆಯನ್ನು ಮುರಿಯಬಹುದು.
ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲೆರಡು ಪಂದ್ಯದಲ್ಲಿ ಚಹಾಲ್ ಒಟ್ಟು 8 ವಿಕೆಟ್ ಪಡೆದಿದ್ದಾರೆ.