ಲಂಕಾ ವಿರುದ್ಧ ವೈಟ್ ವಾಶ್ ಸಾಧನೆ: ಟಿ20 ರ್ಯಾಂಕಿಂಗ್ ನಲ್ಲಿ 2ನೇ ಸ್ಥಾನಕ್ಕೇರಿದ ಭಾರತ

ಸ್ವದೇಶಿ ನೆಲದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿ ವೈಟ್ ವಾಶ್ ಸಾಧನೆ ಮಾಡಿರುವ ಟೀಂ ಇಂಡಿಯಾ ಐಸಿಸಿ ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 
ದುಬೈ: ಸ್ವದೇಶಿ ನೆಲದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿ ವೈಟ್ ವಾಶ್ ಸಾಧನೆ ಮಾಡಿರುವ ಟೀಂ ಇಂಡಿಯಾ ಐಸಿಸಿ ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. 
ಐಸಿಸಿ ಬಿಡುಗಡೆ ಮಾಡಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮೊದಲು 119 ಅಂಕಗಳೊಂದಿಗೆ ಭಾರತ 5ನೇ ಸ್ಥಾನದಲ್ಲಿತ್ತು. ಇದೀಗ 121 ಅಂಕಗಳನ್ನು ಗಳಿಸುವ ಮೂಲಕ 2ನೇ ಸ್ಥಾನಕ್ಕೇರಿದೆ. 
ಇನ್ನು ಸಾಂಪ್ರದಾಯಿಕ ಎದುರಾಳಿ ತಂಡ ಪಾಕಿಸ್ತಾನ 124 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ಇಂಗ್ಲೆಂಡ್ ಮೂರನೇ ಸ್ಥಾನ ಹಾಗೂ ವೆಸ್ಟ್ ಇಂಡೀಸ್ ನಾಲ್ಕನೇ ಸ್ಥಾನದಲ್ಲಿದೆ. 
ಟಿ20 ಬ್ಯಾಟಿಂಗ್ ನಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆ್ಯರನ್ ಫಿಂಚ್ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com