ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ 6 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಯಜುವೇಂದ್ರ ಚಹಾಲ್ ವಿಶ್ವಸಾಧನೆ ಮಾಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚಹಾಲ್ 6 ವಿಕೆಟ್ ಪಡೆದಿದ್ದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ 6 ವಿಕೆಟ್ ಪಡೆದ ವಿಶ್ವದ ಎರಡನೇ ಆಟಗಾರ ಎಂಬ ಖ್ಯಾತಿ ಭಾಜನರಾಗಿದ್ದಾರೆ.
ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಅಜಂತಾ ಮೆಂಡಿಸ್ 8 ರನ್ ಗೆ 6 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದರೆ, ಚಹಾಲ್ 25 ರನ್ ಗೆ 6 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. 5 ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 11 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.