1ನೇ ಟೆಸ್ಟ್: ಬಾಂಗ್ಲಾ ವಿರುದ್ಧ ಟಾಸ್ ಗೆದ್ದು ಟೀಂ ಇಂಡಿಯಾ ಬ್ಯಾಟಿಂಗ್, 266/3

ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 

ಹೈದರಾಬಾದ್: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ 74 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 266 ರನ್ ಗಳಿಸಿದೆ.

ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕೀಳಿದ ಕೆಎಲ್ ರಾಹುಲ್ ಕೇವಲ 2 ರನ್ ಗೆ ಟಸ್ಕಿನ್ ಅಹಮದ್ ಎಸೆತದಲ್ಲಿ ಬೌಲ್ಡ್ ಆಗಿ ನಿರಾಸೆ ಮೂಡಿಸಿದರು. ಇನ್ನು ಮುರುಳಿ ವಿಜಯ್ ಶತಕ ಸಿಡಿಸಿದ್ದು, 156 ಎಸೆತಗಳಲ್ಲಿ 108 ರನ್ ಗಳಿಸಿದ್ದಾರೆ. ಚೇತೇಶ್ವರ ಪೂಜಾರ ಸಹ 83 ರನ್ ಗಳಿಸಿ ತಂಡಕ್ಕೆ ಚೇತರಿಕೆ ತಂದು ಕೊಟ್ಟರು.

ಪ್ರಸ್ತುತ 74 ಓವರ್ ಮುಕ್ತಾಯಕ್ಕೆ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 266 ರನ್ ಗಳಿಸಿದೆ. ಭಾರತ ಪರ ವಿರಾಟ್ ಕೊಹ್ಲಿ ಅಜೇಯ 56 ರನ್ ಮತ್ತು ರಹಾನೆ ಅಜೇಯ 10 ರನ್ ಗಳಿಸಿ ಆಡುತ್ತಿದ್ದಾರೆ. 

ಬಾಂಗ್ಲಾದೇಶ ಪರ ಟಸ್ಕಿನ್ ಅಹಮ್ಮದ್, ಹಸನ್ ಮಿರ್ಝಾ, ತೈಜುಲ್ ಇಸ್ಲಾಂ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com