ಭಾರತ
ಕ್ರಿಕೆಟ್
ಅಂಧರ ಟಿ20 ವಿಶ್ವಕಪ್: ಫೈನಲ್ ಗೆ ಭಾರತ ತಂಡ
ಅಂಧರ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ...
ಹೈದರಾಬಾದ್: ಅಂಧರ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.
ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿ ಫೈನಲ್ ಗೆ ಎಂಟ್ರಿ ಕೊಟ್ಟಿತು.
ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡದ 174 ರನ್ ಗಳಿಗೆ ಆಲೌಟ್ ಆಯಿತು. 175 ರನ್ ಗುರಿ ಬೆನ್ನಟ್ಟಿದ ಭಾರತ ಪರ ಕನ್ನಡಿಗ ಪ್ರಕಾಶ್ ಜಯರಾಮಯ್ಯ 52 ಎಸೆತಗಳಲ್ಲಿ ಅಜೇಯ 115 ರನ್ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಇಂದು ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ-ಇಂಗ್ಲೆಂಡ್ ತಂಡಗಳು ಸೆಣಸಲಿದ್ದು, ಈ ಪಂದ್ಯದಲ್ಲಿ ಗೆದ್ದವರ ಮೇಲೆ ಭಾರತ ತಂಡ ಸೆಣೆಸಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ