ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಏಕದಿನ ರ್ಯಾಂಕಿಂಗ್ ನಲ್ಲಿ ದಕ್ಷಿಣ ಆಫ್ರಿಕಾ ಅಗ್ರಸ್ಥಾನಕ್ಕೇರಿದೆ.
ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 5-0 ಅಂತರದಿಂದ ಲಂಕಾವನ್ನು ವೈಟ್ ವಾಶ್ ಮಾಡಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ಅಗ್ರಸ್ಥಾನಕ್ಕೇರಿದೆ. 119 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ಅಗ್ರಸ್ಥಾನಕ್ಕೇರಿದರೆ 118 ಅಂಕಗಳೊಂದಿಗೆ ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. 113 ಅಂಕದೊಂದಿಗೆ ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದ್ದರೆ 112 ಅಂಕಗಳೊಂದಿಗೆ ಭಾರತ ನಾಲ್ಕನೇ ಸ್ಥಾನದಲ್ಲಿದೆ.
ನ್ಯೂಜಿಲೆಂಡ್ ತಂಡವನ್ನು 2-0 ಅಂಕಗಳೊಂದಿಗೆ ಆಸ್ಟ್ರೇಲಿಯಾ ಮಣಿಸಿ ಅಗ್ರಸ್ಥಾನಕ್ಕೇರಿತ್ತು. ಇದೀಗ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ ಸರಣಿ ಗೆಲ್ಲುವ ಮೂಲಕ 4 ಅಂಕಗಳನ್ನು ಸಂಪಾದಿಸಿದ್ದು, 1 ಅಂಕದ ಮುನ್ನಡೆಯೊಂದಿಗೆ ಆಫ್ರಿಕಾ ಅಗ್ರಸ್ಥಾನವನ್ನು ಅಲಂಕರಿಸಿದೆ.