ಗುಜರಾತ್ ಲಯನ್ಸ್ ತಂಡಕ್ಕೆ ಮೊಹಮ್ಮದ್ ಕೈಫ್ ಸಹಾಯಕ ಕೋಚ್

ಟೀಂ ಇಂಡಿಯಾ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ಗುಜರಾತ್ ಲಯನ್ಸ್ ತಂಡಕ್ಕೆ ಸಹಾಯಕ ಕೋಚ್...
ಮೊಹಮ್ಮದ್ ಕೈಫ್
ಮೊಹಮ್ಮದ್ ಕೈಫ್
Updated on: 
ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ಗುಜರಾತ್ ಲಯನ್ಸ್ ತಂಡಕ್ಕೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದಾರೆ. 
ಐಪಿಎಲ್ 10ರ ಆವೃತ್ತಿ ಏಪ್ರಿಲ್ 5ರಿಂದ ಆರಂಭಗೊಳ್ಳಲಿದೆ. ಸುರೇಶ್ ರೈನಾ ನಾಯಕತ್ವದ ಗುಜರಾತ್ ತಂಡಕ್ಕೆ ಬ್ರಾಡ್ ಹಾಗ್ ಮುಖ್ಯ ಕೋಚ್ ಆಗಿದ್ದು ಇದೀಗ ಸಹಾಯಕ ಕೋಚ್ ಆಗಿ ಕೈಫ್ ಆಯ್ಕೆಯಾಗಿದ್ದಾರೆ. 
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕೈಫ್ ನನ್ನ ಹೊಸ ಸವಾಲನ್ನು ಎದುರು ನೋಡುತ್ತಿದ್ದೇನೆ. ಇದೊಂದು ಅದ್ಭುತ ಅವಕಾಶವಾಗಿದೆ. ಸುರೇಶ್ ರೈನಾ, ರವೀಂದ್ರ ಜಡೇಜಾ, ಬ್ರಾವೋ ಸೇರಿದಂತೆ ಹಲವು ಪ್ರಬಲ ಆಟಗಾರರು ತಂಡದಲ್ಲಿದ್ದು, ಇವರೆಲ್ಲರ ಜತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದರು. 
ಐಪಿಎಲ್ ನಲ್ಲಿ ರಾಜಸ್ಥಾನ ರಾಯಲ್ಸ್, ಕಿಂಗ್ಸ್ ಇಲೆವನ್ ಪಂಜಾಬ್, ರಾಜಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಿದ ಅನುಭವ ಹೊಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com