ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಟೀಂ ಇಂಡಿಯಾದ ಕಳಪೆ ಆಟ!

ಆಸ್ಟ್ರೇಲಿಯಾ ವಿರುದ್ಧ ಪುಣೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾದ ಪ್ರದರ್ಶನ ಭಾರತದ ಕ್ರಿಕೆಟ್ ಇತಿಹಾಸದಲ್ಲಿಯೇ ಅತ್ಯಂತ ಕಳಪೆ ಆಟ ಎಂದು ಹೇಳಲಾಗುತ್ತಿದೆ.
ಕ್ರಿಕ್ ಇನ್ಫೋ ಚಿತ್ರ
ಕ್ರಿಕ್ ಇನ್ಫೋ ಚಿತ್ರ
Updated on: 

ಪುಣೆ: ಆಸ್ಟ್ರೇಲಿಯಾ ವಿರುದ್ಧ ಪುಣೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾದ ಪ್ರದರ್ಶನ ಭಾರತದ ಕ್ರಿಕೆಟ್ ಇತಿಹಾಸದಲ್ಲಿಯೇ ಅತ್ಯಂತ ಕಳಪೆ ಆಟ ಎಂದು ಹೇಳಲಾಗುತ್ತಿದೆ.

ಪ್ರಮುಖವಾಗಿ ಕೊಹ್ಲಿ ಪಡೆ ಕೇವಲ 11 ರನ್ ಗಳ ಅಂತರದಲ್ಲಿ ಬರೊಬ್ಬರಿ 7 ವಿಕೆಟ್ ಕಳೆದುಕೊಂಡಿದ್ದು, ಭಾರತದ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು. 1989-90ರಲ್ಲಿ ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ  ನ್ಯೂಜಿಲೆಂಡ್ ವಿರುದ್ಧ 18 ರನ್ ಗಳ ಅಂತರದಲ್ಲಿ 7 ವಿಕೆಟ್ ಕಳೆದುಕೊಂಡಿತ್ತು. ಇದು ಭಾರತ ತಂಡದ ಅತ್ಯಂತ ಕೆಟ್ಟ ಪ್ರದರ್ಶನವಾಗಿತ್ತು. ಇದೀಗ ಪುಣೆಯಲ್ಲಿ ಕೇವಲ 11 ರನ್ ಗಳ ಅಂತರದಲ್ಲಿ ಭಾರತ 7 ವಿಕೆಟ್ ಕಳೆದುಕೊಂಡು  ಅದಕ್ಕಿಂತಲೂ ಕಳಪೆ ಆಟವನ್ನು ಪ್ರದರ್ಶಿಸಿದೆ.

ಇನ್ನು 5 ಮತ್ತು 7ನೇ ವಿಕೆಟ್ ನ ಅಂತರದಲ್ಲಿ ತಂಡ ಕಲೆಹಾಕಿದ್ದು ಕೇವಲ 1 ರನ್..1 ರನ್ ಅಂತರದಲ್ಲಿ 3 ವಿಕೆಟ್ ಕಳೆದುಕೊಂಡಿದೆ. ಇದೂ ಕೂಡ ತಂಡದ ಕಳಪೆಯಾಟವಾಗಿದ್ದು, ಈ ಹಿಂದೆ 2005-06ರಲ್ಲಿ ದೆಹಲಿಯಲ್ಲಿ ನಡೆದ  ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ 1 ರನ್ ಅಂತರದಲ್ಲಿ 4 ವಿಕೆಟ್ ಕಳೆದುಕೊಂಡಿತ್ತು.

104 ಇನ್ನಿಂಗ್ಸ್ ಗಳ ಬಳಿಕ ಇದೇ ಮೊದಲ ಬಾರಿಗೆ ಕೊಹ್ಲಿ ಡಕ್ ಔಟ್
ಅತ್ಯುತ್ತಮ ಫಾರ್ಮ್ ನಲ್ಲಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಇಂದು ಶೂನ್ಯಕ್ಕೇ ನಿರ್ಗಮಿಸುವುದರೊಂದಿಗೆ ತಂಡಕ್ಕೆ ಭಾರಿ ಹಿನ್ನಡೆಯಾಯಿತು. ಸತತ 104 ಇನ್ನಿಂಗ್ಸ್ ಗಳ ಬಳಿಕ ಕೊಹ್ಲಿ ಶೂನ್ಯಕ್ಕೆ ಔಟ್ ಆಗಿದ್ದು, ಇಂದಿನ  ಪಂದ್ಯದೊಂದಿಗೆ ಕೊಹ್ಲಿ ಒಟ್ಟು 171 ಇನ್ನಿಂಗ್ಸ್ ಗಳಲ್ಲಿ ಒಟ್ಟಾರೆ 10 ಬಾರಿ ಶೂನ್ಯಕ್ಕೆ ನಿರ್ಗಮಿಸಿದ್ದಾರೆ. 2014ರಲ್ಲಿ ಕಾರ್ಡಿಫ್ ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಕೊನೆಯ ಬಾರಿಗೆ ಕೊಹ್ಲಿ ಶೂನ್ಯಕ್ಕೆ ಔಟ್ ಆಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com