ಸಿಡ್ನಿ: ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಆಗಿದ್ದ ಅನುಭವ ಹೊಂದಿರುವ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಇದೀಗ ಆಸ್ಟ್ರೇಲಿಯಾ ಟಿ20 ತಂಡಕ್ಕೆ ಸಹಾಯಕ ಕೋಚ್ ಆಗಿ ಆಯ್ಕೆಯಾಗಿದ್ದಾರೆ.
ತವರಿನಲ್ಲಿ ಶ್ರೀಲಂಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ರಿಕ್ ಪಾಂಟಿಂಗ್ ಸಹಾಯ ಕೋಚ್ ಆಗಿ ನೇಮಕಗೊಂಡಿದ್ದು, ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಹಾಗೂ ಮತ್ತೋರ್ವ ಸಹಾಯಕ ಕೋಚ್ ಜೆಸನ್ ಗಿಲೆಸ್ಪಿ ಜತೆಗೂಡಿ ಕಾರ್ಯನಿರ್ವಹಿಸಲಿದ್ದಾರೆ.
ಆಸ್ಟ್ರೇಲಿಯಾ ತಂಡದ ನಾಯಕರಾಗಿದ್ದ ರಿಕಿ ಪಾಂಟಿಂಗ್ ಹಲವು ತಂಡಕ್ಕೆ ಹಲವು ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು.