ನಾನು ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಅರ್ಹನಲ್ಲ: ಸೌರವ್ ಗಂಗೂಲಿ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಉತ್ತರಾಧಿಕಾರಿಯಾಗುವ ರೇಸ್ ನಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ...
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಉತ್ತರಾಧಿಕಾರಿಯಾಗುವ ರೇಸ್ ನಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮುಂಚೂಣಿಯಲ್ಲಿದ್ದು ಅಧ್ಯಕ್ಷ ಹುದ್ದೆಗೆ ನಾನು ಅರ್ಹನಲ್ಲ ಎಂದು ಹೇಳಿದ್ದಾರೆ.

ಬಿಸಿಸಿಐ ಅಧ್ಯಕ್ಷ ಹುದ್ದೆ ರೇಸ್ ನಲ್ಲಿ ನನ್ನ ಹೆಸರು ಅನಗತ್ಯವಾಗಿ ಬಂದಿದೆ. ನಾನು ಸಿಎಬಿ ಅಧ್ಯಕ್ಷನಾಗಿ ಒಂದು ವರ್ಷವನ್ನಷ್ಟೇ ಪೂರೈಸಿದ್ದೇನೆ ಹೀಗಾಗಿ ನಾನಿನ್ನು ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಅರ್ಹನಲ್ಲ ಎಂದು ಹೇಳಿದ್ದಾರೆ.

ಇದರೊಂದಿಗೆ ತಾವು ಬಿಸಿಸಿಐ ಅಧ್ಯಕ್ಷ ಹುದ್ದೆ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಸುಪ್ರೀಂಕೋರ್ಟ್ ಆದೇಶಕ್ಕೆ ಮನ್ನಣೆಕೊಟ್ಟು ಲೋಧ ಸಮಿತಿಯ ಶಿಫಾರಸ್ಸುಗಳನ್ನು ಸಿಎಬಿಯಲ್ಲಿ ಸಮಗ್ರವಾಗಿ ಜಾರಿಗೊಳಿಸಲಾಗುವುದು ಎಂದು ಗಂಗೂಲಿ ಹೇಳಿದ್ದಾರೆ.

ನ್ಯಾ. ಲೋಧ ಸಮಿತಿ ಶಿಫಾರಸಿನಂತೆ ಬಿಸಿಸಿಐನ ಉನ್ನತಾಧಿಕಾರಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಅದರಂತೆ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com