ಕ್ರಿಕೆಟ್

ನಾಯಕತ್ವಕ್ಕೆ ನಿವೃತ್ತಿ ಘೋಷಿಸಿರುವ ಧೋನಿ ಯಾವ ಕ್ರಮಾಂಕದಲ್ಲಿ ಆಡಿದರೆ ಸೂಕ್ತ!

ನಾಯಕತ್ವಕ್ಕೆ ನಿವೃತ್ತಿ ಘೋಷಿಸಿರುವ ಧೋನಿ ಯಾವ ಕ್ರಮಾಂಕದಲ್ಲಿ ಆಡಿದರೆ ಸೂಕ್ತ!
ಎಂಎಸ್ ಧೋನಿ
Published On :
ನವದೆಹಲಿ: ಟೀಂ ಇಂಡಿಯಾ ಸೀಮಿತ ಓವರ್ ಗಳ ತಂಡದ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ಸದ್ಯ ನಿವೃತ್ತಿ ಘೋಷಿಸಿದ್ದು ಮುಂದೆ ಧೋನಿ ಯಾವ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. 
ಧೋನಿ ನಾಯಕತ್ವದಲ್ಲಿ ಭಾರತ ತಂಡ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಧೋನಿ ನಾಯಕತ್ವದ ಜವಾಬ್ದಾರಿ ಜತೆಗೆ ತಂಡವನ್ನು ಗೆಲುವಿನ ಹಾದಿಗೆ ಕರೆದೊಯ್ಯುವ ಚಾಣಾಕ್ಷತನ ಅವರಿಗಿದೆ. ಜತೆಗೆ ಎಂತ ಪರಿಸ್ಥಿತಿಯಲ್ಲೂ ಕೂಲ್ ಆಗಿ ಆಡುವ ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡಿ ಉತ್ತಮವಾಗಿ ಪ್ರದರ್ಶನ ನೀಡಿದ್ದಾರೆ. ಇದೀಗ ಯಾವುದೇ ಜವಾಬ್ದಾರಿ ಇಲ್ಲದ ಧೋನಿ ಅವರು ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಇನ್ನಷ್ಟು ಪ್ರತಿಭೆ ತೋರಬಹುದಾಗಿದೆ. 
ಲೋಧಾ ಸಮಿತಿ ಶಿಫಾರಸು ಅನುಷ್ಠಾನ ನಂತರ ಆಯ್ಕೆ ಸಮಿತಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದ್ದು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆಯ್ಕೆಗಾರರ ಕೊನೆಯ ಸಭೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎಂಎಸ್ಕೆ ಪ್ರಸಾದ್ ನೇತೃತ್ವದ ಸಮಿತಿ ಇದೀಗ ಏಕದಿನ ತಂಡಕ್ಕೆ ಸೂಕ್ತ ನಾಯಕನ ಅನ್ವೇಷಣೆಯಲ್ಲಿ ತೊಡಗಿದೆ. ಸದ್ಯಕ್ಕೆ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೆಸರು ಕೇಳಿಬರುತ್ತಿದ್ದು ಕೊಹ್ಲಿ ಹೆಸರನ್ನು ಆಯ್ಕೆ ಸಮಿತಿ ಅಂತಿಮಗೊಳಿಸುತ್ತಾ ಎಂದು ಕಾದುನೋಡಬೇಕಿದೆ.
ಟೀಂ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಧೋನಿ 68.4ರ ಸರಾಸರಿ ಹೊಂದಿದ್ದಾರೆ. ಇದು ಏಕದಿನ ಇತಿಹಾಸದಲ್ಲೇ ಅಗ್ರಮಾನ್ಯವಾಗಿದೆ. ಇನ್ನು ಆಡಿರುವ 20 ಇನ್ನಿಂಗ್ಸ್ ನಲ್ಲಿ ಧೋನಿ 1026 ರನ್ ಗಳಿಸಿದ್ದು 99.41 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 10 ಅರ್ಧ ಶತಕ ಕೂಡಿದೆ. 
2019 ಏಕದಿನ ವಿಶ್ವಕಪ್ ಟೂರ್ನಿ ಪೂರ್ವಭಾವಿ ತಯಾರಿಗಾಗಿ ಮಹೇಂದ್ರ ಸಿಂಗ್ ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದು ಸೂಕ್ತ ಮಾತುಗಳು ಇದೀಗ ಕ್ರಿಕೆಟ್ ವಲಯದಲ್ಲಿ ಕೇಳಿಬರುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.