ನವದೆಹಲಿ: ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎನ್ಕೆ ಪ್ರಸಾದ್ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದರು. ಸೀಮಿತ ಓವರ್ ಗಳಿಗೆ ಎಂಎಸ್ ಧೋನಿ ನಿೃತ್ತಿ ಘೋಷಿಸಿದ ನಂತರ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಏಕದಿನ, ಟಿ20 ಕ್ರಿಕೆಟ್ ತಂಡದ ನಾಯಕತ್ವವನ್ನು ನೀಡಿದ್ದು ಕ್ರಿಕೆಟ್ ಮೂರು ಮಾದರಿಗಳಿಗೂ ವಿರಾಟ್ ಕೊಹ್ಲಿ ನಾಯಕತ್ವ ವಹಿಸಲಿದ್ದಾರೆ.
ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.