ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿಗೆ ಬೆದರಿಕೆ ಪತ್ರ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ದುಷ್ಕರ್ಮಿಗಳು ಬೆದರಿಕೆ ಪತ್ರ ಬ...
ಸೌರವ್ ಗಂಗೂಲಿ
ಸೌರವ್ ಗಂಗೂಲಿ
Updated on: 

ಕೋಲ್ಕೊತ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ.

ಮೇದಿನಿಪುರದಲ್ಲಿರುವ ವಿದ್ಯಾಸಾಗರ  ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬಾರದು ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ ಎಂದು ಗಂಗೂಲಿ ತಿಳಿಸಿದ್ದಾರೆ.

ಜನವರಿ 7ರಂದು ನನಗೊಂದು ಬೆದರಿಕೆ ಪತ್ರ ಬಂದಿದೆ. ಪೊಲೀಸರಿಗೆ ದೂರು ನೀಡಿದ್ದೇನೆ. ಜೊತೆಗೆ ಕಾರ್ಯಕ್ರಮ ಆಯೋಜಕರಿಗೂ ತಿಳಿಸಿದ್ದೇನೆ ಎಂದು ಭಾರತ ತಂಡದ ಮಾಜಿ ನಾಯಕ ಗಂಗೂಲಿ ಸ್ಪಷ್ಟಪಡಿಸಿದ್ದಾರೆ.

ಜ. 19ರಂದು ವಿದ್ಯಾಸಾಗರ ವಿಶ್ವವಿದ್ಯಾಲಯ ಮತ್ತು ಜಿಲ್ಲಾ ಕ್ರೀಡಾ ಸಂಘಟನೆಯು ಕಾರ್ಯಕ್ರಮವನ್ನು ಆಯೋಜಿಸಿದೆ. ಅದೊಂದು ನೇರಪ್ರಸಾರದ ಕಾರ್ಯಕ್ರಮವಾಗಿದ್ದು, ನಾನು ಅಲ್ಲಿಗೆ ಹೋದ ಮೇಲೆ ಏನು ಘಟಿಸಬಹುದೆಂದು ಎಲ್ಲರಿಗೂ ತಿಳಿಯಲಿದೆ’ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com