

ಪುಣೆ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 38 ಓವರ್ ಮುಕ್ತಾಯಕ್ಕೆ 4 ವಿಕೆಟ್ ಕಳೆದುಕೊಂಡು 220 ರನ್ ಗಳಿಸಿ ಆಡುತ್ತಿದೆ.
ಮಹಾರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಪರ ರಾಯ್ 73, ಹಾಲೇಸ್ 9, ಮೋರ್ಗನ್ 28, ಬಟ್ಲರ್ 31 ರನ್ ಗಳಿಸಿ ಓಟಾದರು. ಈ ವೇಳೆ ಜೋ ರೂಟ್ ತಂಡ ಅಲ್ಪಮೊತ್ತಕ್ಕೆ ಕುಸಿಯುವುದರಿಂದ ತಪ್ಪಿಸಿದರು.
ಟೀಂ ಇಂಡಿಯಾ ಹಾರ್ದಿಕ್ ಪಾಂಡ್ಯಾ 2, ರವೀಂದ್ರ ಜಡೇಜಾ 1 ವಿಕೆಟ್ ಪಡೆದಿದ್ದಾರೆ.