ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ರಾಹುಲ್ ದ್ರಾವಿಡ್

ಗಳೂರು ವಿಶ್ವವಿದ್ಯಾಲಯವು 52ನೇ ಘಟಿಕೋತ್ಸವದ ಅಂಗವಾಗಿ ಜನವರಿ 27 ರಂದು ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್‌ ...
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು 52ನೇ ಘಟಿಕೋತ್ಸವದ ಅಂಗವಾಗಿ ಜನವರಿ 27 ರಂದು ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್‌ ಪದವಿಯನ್ನು ಮಾಜಿ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ನಿರಾಕರಿಸಿದ್ದಾರೆ.

ಅಂಡರ್ 19 ತಂಡದ ಕೋಚ್ ಆಗಿರುವ ರಾಹುಲ್ ಸಂಶೋಧನೆ ಮಾಡಿಯೇ ಡಾಕ್ಟರೇಟ್ ಪಡೆಯುವುದಾಗಿ ಸೌಜನ್ಯದಿಂದ ನಿರಾಕರಿಸಿದ್ದಾರೆ. 2014 ರಲ್ಲಿ ಗುಲ್ಬರಗಾ ವಿವಿ ನೀಡಲು ಬಯಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನೂ ಕೂಡ ರಾಹುಲ್ ನಿರಾಕರಿಸಿದ್ದರು. ದಶಕಗಳಿಗೂ ಹೆಚ್ಚುಕಾಲ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಆಡಿದ್ದ ರಾಹುಲ್‌ ಭಾರತ ಕ್ರಿಕೆಟ್‌ ತಂಡದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಬೆಂಗಳೂರು ವಿವಿ ಬಗ್ಗೆ ತಮಗೆ ಅಪಾರ ಗೌರವವಿದೆ. ಹೀಗಾಗಿ ನಾನು ಸಂಶೋಧನೆ ಮಾಡಿದ ನಂತರ ಗೌರವ ಡಾಕ್ಟರೇಟ್ ಸ್ವೀಕರಿಸುತ್ತೇನೆ ಎಂದು ರಾಹುಲ್ ಹೇಳಿದ್ದಾರೆ ಎಂದು ವಿವಿ ಉಪ ಕುಲಪತಿ ಬಿ., ತಿಮ್ಮೇಗೌಡ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com