ಪಾಕ್ ತಂಡದ ನಾಯಕ ಅಜರ್ ಅಲಿಗೆ ಅಭಿಮಾನಿಗಳಿಂದ ಛೀಮಾರಿ

ಅಜರ್ ಅಲಿ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲು ಕಂಡಿದ್ದು ಅಲಿಗೆ ಪಾಕ್ ಅಭಿಮಾನಿಗಳು ತೀವ್ರ ತರಾಟೆಗೆ...
ಅಜರ್ ಅಲಿ
ಅಜರ್ ಅಲಿ
ಕರಾಚಿ: ಅಜರ್ ಅಲಿ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲು ಕಂಡಿದ್ದು ಅಲಿಗೆ ಪಾಕ್ ಅಭಿಮಾನಿಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. 
ಲಾಹೋರ್ ವಿಮಾನ ನಿಲ್ದಾಣಕ್ಕೆ ತಂಡ ಬಂದಿಳಿದಾಗ ಪಾಕ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾಯಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. 
ಲಾಹೋರ್ ವಿಮಾನ ನಿಲ್ದಾಣದ ಟರ್ಮಿನಲ್ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಅಜರ್ ವಿರುದ್ಧ ಘೋಷಣೆ ಕೂಗಿದರು. ನಾಯಕತ್ವದಿಂದ ಕೆಳಕ್ಕೆ ಇಳಿಯಿರಿ ಎಂದು ಕೂಗಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com