ಡರ್ಬಿ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವು ಸಾಧಿಸಿದೆ.
ಡರ್ಬಿಯ ಕೌಂಟಿ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು 16 ರನ್ ಗಳಿಂದ ಮಣಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 232 ರನ್ ಪೇರಿಸಿತು. 233 ರನ್ ಗಳ ಗುರಿ ಬೆನ್ನಟ್ಟಿದ ಲಂಕಾ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಗಳನಷ್ಟೇ ಗಳಿಸಲು ಶಕ್ತವಾಯಿತು.
ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ 78 ಮತ್ತು ತಂಡದ ನಾಯಕಿ ಮಿಥಾಲಿ ರಾಜ್ 53 ರನ್ ಗಳ ಜತೆಯಾಟ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸಲು ಸಾಧ್ಯವಾಯಿತು. ಇಳಿದಂತೆ ಪೂನಂ ರಾವುತ್ 16, ಕೌರ್ 20, ಕೃಷ್ಣಮೂರ್ತಿ 29 ರನ್ ಗಳಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ವೀರಕ್ಕೊಡಿ 3, ರಣವೀರ 2 ವಿಕೆಟ್ ಪಡೆದಿದ್ದಾರೆ.
ಶ್ರೀಲಂಕಾ ಪರ ಹನ್ಸಿಕಾ 29, ಜಯಾಂಗನಿ 25, ಸಿರಿವರ್ಧನೆ 37, ಸುರಂಗಿಕಾ 61 ಮತ್ತು ಪ್ರಸಾದನಿ 21 ರನ್ ಗಳಿಸಿದ್ದಾರೆ. ಭಾರತ ಪರ ಜೂಲನ್ ಗೋಸ್ವಾಮಿ ಮತ್ತು ಪೂನಂ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ.