ವಿಂಡೀಸ್ ವಿರುದ್ಧದ ಏಕದಿನ ಸರಣಿ ಜಯಿಸಿದ ಟೀಂ ಇಂಡಿಯಾ

ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬರೊಬ್ಬರಿ 8 ವಿಕೆಟ್ ಗಳ ಅಂತರದಲ್ಲಿ ಪಂದ್ಯ ಗೆಲ್ಲುವ ಮೂಲಕ 5 ಪಂದ್ಯಗಳ ಏಕದಿನ ಸರಣಿಯನ್ನು 3-1ರಲ್ಲಿ ಜಯಿಸಿದೆ.
ಕ್ರಿಕ್ ಇನ್ಫೋ ಚಿತ್ರ
ಕ್ರಿಕ್ ಇನ್ಫೋ ಚಿತ್ರ

ಕಿಂಗ್ಸ್ ಟನ್: ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬರೊಬ್ಬರಿ 8 ವಿಕೆಟ್ ಗಳ ಅಂತರದಲ್ಲಿ ಪಂದ್ಯ ಗೆಲ್ಲುವ ಮೂಲಕ 5 ಪಂದ್ಯಗಳ ಏಕದಿನ ಸರಣಿಯನ್ನು 3-1ರಲ್ಲಿ  ಜಯಿಸಿದೆ.

ಕಿಂಗ್ಸ್ ಟನ್ ನಲ್ಲಿ ನಿನ್ನೆ ನಡೆದ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಭಾರತದ ಶಮಿ ಮತ್ತು ಉಮೇಶ್ ಯಾದವ್ ಪ್ರಬಲ ಬೌಲಿಂಗ್ ಗೆ ತತ್ತರಿಸಿದ ಹೋಲ್ಡರ್ಸ್  ಪಡೆ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 205 ರನ್ ಗಳನ್ನು ಕಲೆಹಾಕಿತು. ವಿಂಡೀಸ್ ಪರ ಕೆಎ ಹೋಪ್ 51 ರನ್ ಗಳಿಸಿದರೆ, ಎಸ್ ಡಿ ಹೋಪ್ 46 ರನ್ ಗಳಿಸಿದರು. ಮಧ್ಯಮ ಕ್ರಮಾಂಕದ ಆಟಗಾರರಾದ ನಾಯಕ  ಹೋಲ್ಡರ್ 36 ರನ್ ಹಾಗೂ ಪಾವೆಲ್ 31 ರನ್ ಗಳಿಸಿ ತಂಡದ ಮೊತ್ತ 200 ರ ಗಡಿ ದಾಟುವಲ್ಲಿ ಕಾರಣರಾದರು.

ವಿಂಡೀಸ್ ನೀಡಿದ 206 ರನ್ ಗಳ ಸಾಧಾರಣ ಮೊತ್ತದ ಗುರಿ ಬೆನ್ನುಹತ್ತಿದ ಭಾರತ ತಂಡ ಆರಂಭಿಕ ಆಘಾತ ಎದುರಾಯಿತು. 4 ರನ್ ಗಳಿಸಿದ್ದ ಧವನ್ ಜೋಸೆಫ್ ವಿಕೆಟ್ ಒಪ್ಪಿಸದರು. ಬಳಿಕ 39 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ  ರಹಾನೆ ಕೂಡ ಬಿಶೂ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು. ಬಳಿಕ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ಜೋಡಿ ತಂಡಕ್ಕೆ ಯಾವುದೇ ಅಪಾಯ ಎದುರಾಗದಂತೆ ನೋಡಿಕೊಂಡರು. ಅಂತಿಮ ಏಕದಿನ  ಪಂದ್ಯದಲ್ಲಿ ತಮ್ಮ ಉತ್ತಮ ಫಾರ್ಮ್ ಮುಂದುವರೆಸಿದ ನಾಯಕ ವಿರಾಟ್ ಕೊಹ್ಲಿ ಅಜೇಯ 111 ರನ್ ಗಳಿಸಿದರೆ, ಕಾರ್ತಿಕ್ ಅಜೇಯ 50 ರನ್ ಗಳಿಸಿದರು.

ಅಂತಿಮವಾಗಿ ಭಾರತ ತಂಡ 36.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿತಲುಪಿತು. ಆ ಮೂಲಕ ವಿಂಡೀಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯಸಾಧಿಸಿ. 3-1ರಲ್ಲಿ ಸರಣಿ ತನ್ನದಾಗಿಸಿಕೊಂಡಿತು.

111 ರನ್ ಗಳಿಸಿ ಪಂದ್ಯ ಗೆಲ್ಲಿಸಿಕೊಟ್ಟ ಕೊಹ್ಲಿ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನಾರದರೆ, ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ  ನೀಡಿದ ರಹಾನೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com