ಹೊಸ ಕೋಚ್ ನೇಮಕ ನಿರ್ಧಾರ ಅಂತಿಮಗೊಂಡಿಲ್ಲ: ಅಮಿತಾಬ್ ಚೌಧರಿ

ಟೀಂ ಇಂಡಿಯಾ ನೂತನ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾದ ಕುರಿತು ಸುದ್ದಿಗಳು ಬಿತ್ತರವಾದ ಬೆನ್ನಲ್ಲೇ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಕೋಚ್ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌದರಿ ಮಂಗಳವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಟೀಂ ಇಂಡಿಯಾ ನೂತನ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾದ ಕುರಿತು ಸುದ್ದಿಗಳು ಬಿತ್ತರವಾದ ಬೆನ್ನಲ್ಲೇ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಕೋಚ್ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ ಎಂದು ಬಿಸಿಸಿಐ  ಕಾರ್ಯದರ್ಶಿ ಅಮಿತಾಬ್ ಚೌಧರಿ ಮಂಗಳವಾರ ಹೇಳಿದ್ದಾರೆ.

ರವಿಶಾಸ್ತ್ರಿ ಅವರು ಪ್ರಧಾನ ಕೋಚ್ ಆಗಿ ನೇಮಕವಾದ ಕುರಿತು ಸುದ್ದಿಗಳು ಪ್ರಸಾರವಾದ ಬೆನ್ನಲ್ಲೇ ತುರ್ತು ಸುದ್ದಿಗೋಷ್ಠಿ ಕರೆದ ಅಮಿತಾಬ್ ಚೌದರಿ ಅವರು, ಟೀಂ ಇಂಡಿಯಾ ಕೋಚ್ ಆಯ್ಕೆ ಸಂಬಂಧ ಈ ವರೆಗೂ ಯಾವುದೇ  ಅಂತಿಮ ನಿರ್ಣಯ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಕೋಚ್ ಆಯ್ಕೆ ಸಂಬಂಧ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷಣ್ ಅವರು ಇನ್ನೂ ಅಂತಿಮ ತೀರ್ಮಾನಕ್ಕೆ  ಬಂದಿಲ್ಲ. ಹೀಗಾಗಿ ಇನ್ನೂ ಕೋಚ್ ಆಯ್ಕೆ ಪ್ರಕ್ರಿಯೆ ಅಂತಿಮವಾಗಿಲ್ಲ ಎಂದು ಅಮಿತಾಬ್ ಚೌದರಿ ಹೇಳಿದ್ದಾರೆ.

ಈಗ್ಗೇ ಕೆಲ ಗಂಟೆಗಳ ಹಿಂದಷ್ಟೇ ಟೀಂ ಇಂಡಿಯಾದ ನೂತನ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾಗಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಸ್ಥಳೀಯ ಮಾಧ್ಯಮಗಳು ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳಲ್ಲೂ ಈ ಬಗ್ಗೆ ವ್ಯಾಪಕ  ಸುದ್ದಿ ಪ್ರಸಾರವಾಗಿತ್ತು. ಇದೀಗ ಈ ಎಲ್ಲ ಸುದ್ದಿಗಳು ಸುಳ್ಳು ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಅಂತೆಯೇ ವಿರಾಟ್ ಕೊಹ್ಲಿ ಅವರು ನೂತನ ಕೋಚ್ ಆಯ್ಕೆ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com