2019 ಕ್ರಿಕೆಟ್ ವಿಶ್ವ ಕಪ್ ವರಗೆ ಟೀಂ ಇಂಡಿಯಾ ಕೋಚ್ ಆಗಿ ರವಿ ಶಾಸ್ತ್ರಿ ಆಯ್ಕೆ: ವರದಿ

ಟೀಂ ಇಂಡಿಯಾ ಮಾಜಿ ನಿರ್ದೇಶಕ ಹಾಗೂ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರು ನೂತನ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಟೀಂ ಇಂಡಿಯಾ ಮಾಜಿ ನಿರ್ದೇಶಕ ಹಾಗೂ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರು ನೂತನ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಟೀಂ ಇಂಡಿಯಾ ಕೋಚ್ ಗಾಗಿ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರು ನಡೆಸಿದ್ದ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ರವಿಶಾಸ್ತ್ರಿ ಅವರನ್ನು ಅಧಿಕೃತವಾಗಿ ಟೀಂ ಇಂಡಿಯಾ ಪ್ರಧಾನ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು  ತಿಳಿದುಬಂದಿದೆ. ಕೋಚ್ ಹುದ್ದೆಗಾಗಿ ರವಿಶಾಸ್ತ್ರಿ ಹಾಗೂ ಮಾಜಿ ಕ್ರಿಕೆಟಿಗೆ ವಿರೇಂದ್ರ ಸೆಹ್ವಾಗ್ ನಡುವೆ ತೀವ್ರ ಪೈಪೋಟಿ ಎದುರಾಗಿತ್ತಾದರೂ ಅಂತಿಮವಾಗಿ ರವಿಶಾಸ್ತ್ರಿ ಅವರನ್ನು ನೂತನ ಪ್ರಧಾನ ಕೋಚ್ ಆಗಿ ಆಯ್ಕೆ ಮಾಡಲಾಗಿದೆ.

ಮೂಲಗಳ ಪ್ರಕಾರ 2019ರ ವಿಶ್ವಕಪ್ ಕ್ರಿಕೆಟ್ ಟೂರ್ನಿಯವರೆಗೂ ರವಿಶಾಸ್ತ್ರಿ ಅವರನ್ನು ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರು ವಾಖೆಂಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಕೋಚ್ ಆಕಾಂಕ್ಷಿಗಳ ಸಂದರ್ಶನ ನಡೆಸಿದ್ದರು.  ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ವಿವಿಎಸ್  ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿ ನೇತೃತ್ವದಲ್ಲಿ ಕೋಚ್ ಆಕಾಂಕ್ಷಿಗಳ ಸಂದರ್ಶನ ನಡೆಸಲಾಯಿತು. ರವಿಶಾಸ್ತ್ರಿ, ಸೆಹ್ವಾಗ್, ಆಸ್ಟ್ರೇಲಿಯಾದ ಮಾಜಿ ಆಲ್ ರೌಂಡರ್ ಟಾಮ್ ಮೂಡಿ, ಹಾಲಿ ಆಫ್ಘಾನಿಸ್ತಾನ ತಂಡದ ಕೋಚ್ ಲಾಲ್  ಚಂದ್ ರಜಪೂತ್, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ಕೋಚ್ ಮತ್ತು ನಿರ್ದೇಶಕರಾದ ರಿಚರ್ಡ್ ಫೈಬಸ್ ಸೇರಿ ಒಟ್ಟು 6 ಮಂದಿ ಕೋಚ್ ಆಕಾಂಕ್ಷಿಗಳು ಸಂದರ್ಶನದಲ್ಲಿ ಪಾಲ್ಗೊಂಡಿದ್ದರು.

ಸಂದರ್ಶನದ ಬಳಿಕ ಮಾತನಾಡಿದ್ದ ಸಿಎಸಿ ಸದಸ್ಯ ಸೌರವ್ ಗಂಗೂಲಿ ಅವರು, ವಿರಾಟ್ ಕೊಹ್ಲಿ ಅಭಿಪ್ರಾಯ ಸಂಗ್ರಹಣ ಬಳಿಕ ಕೋಚ್ ಆಯ್ಕೆ ಘೋಷಣೆ ಮಾಡುವುದಾಗಿ ಹೇಳಿದ್ದರು. ಇನ್ನು ಇಂದು ಬೆಳಗ್ಗೆ ಸಿಒಎ ಕೂಡ ಇಂದೇ  ನೂತನ ಕೋಚ್ ಘೋಷಿಸುವಂತೆ ಬಿಸಿಸಿಐಗೆ ಸೂಚಿಸಿದ್ದ ಹಿನ್ನಲೆಯಲ್ಲಿ ರವಿಶಾಸ್ತ್ರಿ ಅವರನ್ನು ನೂತನ ಕೋಚ್ ಆಗಿ ಘೋಷಣೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com