ಮುಂದಿನ ಎರಡು ವರ್ಷ ಟೀಂ ಇಂಡಿಯಾ ಕ್ರಿಕೆಟ್ ಸರಣಿಗಳ ವೇಳಾಪಟ್ಟಿ

2019ರ ಜೂನ್ ನಲ್ಲಿ ಇಂಗ್ಲೆಂಡ್ ನಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ನಡೆಯಲಿದ್ದು ಅಲ್ಲಿಯವರೆಗಿನ ಟೀಂ ಇಂಡಿಯಾದ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಗಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 
2019ರ ಜೂನ್ ನಲ್ಲಿ ಇಂಗ್ಲೆಂಡ್ ನಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ನಡೆಯಲಿದ್ದು ಅಲ್ಲಿಯವರೆಗಿನ ಟೀಂ ಇಂಡಿಯಾದ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಗಿದೆ. 
ಹಲವು ಕಿತ್ತಾಟಗಳ ಬಳಿಕ ಟೀಂ ಇಂಡಿಯಾಗೆ ರವಿಶಾಸ್ತ್ರಿ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿದ್ದಾರೆ. ಇದೇ ವೇಳೆ ಬೌಲಿಂಗ್ ವಿಭಾಗದಲ್ಲಿ ಜಹೀರ್ ಖಾನ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ರಾಹುಲ್ ದ್ರಾವಿಡ್ ಕೋಚ್ ಆಗಿ ಆಯ್ಕೆಗೊಂಡಿದ್ದು ಈ ಮೂವರು ಕೋಚ್ ಗಳ ಮುಂದೆ ಬೆಟ್ಟದಷ್ಟು ಕಠಿಣ ಸವಾಲುಗಳಿವೆ. 
ಮುಂದಿನ ಎರಡು ವರ್ಷದ ಟೀಂ ಇಂಡಿಯಾ ಸರಣಿಗಳು
* ಭಾರತ ಜುಲೈ 26ರಿಂದ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಜುಲೈ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಭಾರತ ಶ್ರೀಲಂಕಾ ವಿರುದ್ಧ 3 ಟೆಸ್ಟ್, 5 ಏಕದಿನ, 1 ಟಿ20 ಪಂದ್ಯಗಳನ್ನು ಆಡಲಿದೆ. 
* 2017ರ ಅಕ್ಟೋಬರ್ ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 7 ಏಕದಿನ ಸರಣಿ ಮತ್ತು 2 ಟಿ20 ಪಂದ್ಯಗಳನ್ನು ಆಡಲಿದೆ. 
* 2017 ನವೆಂಬರ್ ನಿಂದ 2018ರ ಜನವರಿವರೆಗೂ ಭಾರತ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು ಆಫ್ರಿಕಾ ವಿರುದ್ಧ 3 ಟೆಸ್ಟ್, 7 ಏಕದಿನ ಮತ್ತು 2 ಟಿ20 ಪಂದ್ಯಗಳನ್ನು ಆಡಲಿದೆ. 
* 2018ರ ಜನವರಿ-ಫೆಬ್ರವರಿಯಲ್ಲಿ ಭಾರತ ಪಾಕಿಸ್ತಾನ ವಿರುದ್ಧ ತವರಿನಲ್ಲಿ ಸರಣಿ ಆಡುವ ಸಾಧ್ಯತೆ ಇದೆ.(ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಪಾಕಿಸ್ತಾನ ಭಾರತಕ್ಕೆ ಆಗಮಿಸಲಿದೆ). 
* 2018ರ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ತವರಿನಲ್ಲಿ ಶ್ರೀಲಂಕಾ ವಿರುದ್ಧ ಭಾರತ 3 ಟೆಸ್ಟ್, 5 ಏಕದಿನ, 2 ಟಿ20 ಪಂದ್ಯಗಳನ್ನು ಆಡಲಿದೆ. 
* 2018ರ ಜೂನ್-ಆಗಸ್ಟ್ ನಲ್ಲಿ ಭಾರತ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್ ವಿರುದ್ದ ಭಾರತ 5 ಟೆಸ್ಟ್, 5 ಏಕದಿನ, 1 ಟಿ20 ಪಂದ್ಯವನ್ನಾಡಲಿದೆ. 
* 2018ರ ಅಕ್ಟೋಬರ್-ನವೆಂಬರ್ ನಲ್ಲಿ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 2 ಟೆಸ್ಟ್, 5 ಏಕದಿನ ಮತ್ತು 1 ಟಿ20 ಪಂದ್ಯಗಳನ್ನು ಆಡಲಿದೆ. 
* 2018ರ ನವೆಂಬರ್ ನಿಂದ 2019ರ ಜನವರಿ ವರೆಗೂ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು 4 ಟೆಸ್ಟ್ ಪಂದ್ಯಗಳನ್ನು ಆಡಲಿದೆ. 
* 2019ರ ಫೆಬ್ರವರಿ-ಮಾರ್ಚ್ ನಲ್ಲಿ ಭಾರತ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು 3 ಟೆಸ್ಟ್, 5 ಏಕದಿನ ಮತ್ತು 2 ಟಿ20 ಪಂದ್ಯಗಳನ್ನು ಆಡಲಿದೆ. 
* 2019ರ ಜೂನ್-ಜುಲೈ ನಲ್ಲಿ ಇಂಗ್ಲೆಂಡ್ ನಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com