ಮಹಿಳಾ ವಿಶ್ವಕಪ್ ಕ್ರಿಕೆಟ್: ನ್ಯೂಜಿಲೆಂಡ್ ಮಣಿಸಿದ ಭಾರತ ಸೆಮಿ ಫೈನಲ್ ಗೆ!

ಮಹಿಳಾ ವಿಶ್ವಕಪ್‌ ಕ್ರಿಕೆಟ್ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಭಾರತೀಯ ವನಿತೆಯರ ತಂಡ ಟೂರ್ನಿಯ ತಮ್ಮ ಅಂತಿಮ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 186 ರನ್ ಗಳ ಭರ್ಜರಿ ಜಯ ದಾಖಲಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಕ್ರಿಕ್ ಇನ್ಫೋ ಚಿತ್ರ
ಕ್ರಿಕ್ ಇನ್ಫೋ ಚಿತ್ರ

ಡರ್ಬಿ: ಮಹಿಳಾ ವಿಶ್ವಕಪ್‌ ಕ್ರಿಕೆಟ್ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಭಾರತೀಯ ವನಿತೆಯರ ತಂಡ ಟೂರ್ನಿಯ ತಮ್ಮ ಅಂತಿಮ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 186 ರನ್ ಗಳ ಭರ್ಜರಿ ಜಯ ದಾಖಲಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಶನಿವಾರ ಲಂಡನ್ ನ ಡರ್ಬಿಯಲ್ಲಿ ನಡೆದ ಪಂದ್ಯದಲ್ಲಿ ಭಾರತದ ವನಿತೆಯರು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದರು. ಆದರೆ ಪಂದ್ಯದ ಆರಂಭದಲ್ಲೇ ತಂಡದ ಆರಂಭಿಕರಾದ ಸ್ಮೃತಿ ಮಂದಾನ  ಹಾಗೂ ಪಿಜಿ ರೌತ್ ಅವರು ಬೇಗನೆ ವಿಕೆಟ್ ಕಳೆದುಕೊಳ್ಳುವುದರೊಂದಿಗೆ ಭಾರತ ತಂಡ ಒತ್ತಡಕ್ಕೆ ಸಿಲುಕಿತು. ಈ ವೇಳೆ ಕ್ರೀಸ್ ಆಗಮಿಸಿದ ನಾಯಕಿ ಮಿಥಾಲಿ ರಾಜ್ ಹಾಗೂ ಕೌರ್ ತಂಡವನ್ನು ಆರಂಭಿಕ ಆಘಾತದಿಂದ ಪಾರು  ಮಾಡಿದರು.

ನಾಯಕಿ ಮಿಥಾಲಿ ರಾಜ್ 123 ಎಸೆತಗಳಲ್ಲಿ 109 ರನ್ ಗಳಿಸಿದರೆ, ನಾಯಕಿಗೆ ಉತ್ತಮ ಸಾಥ್ ನೀಡಿದ ಕೌರ್ 90 ಎಸೆತಗಳಲ್ಲಿ 60 ರನ್ ಗಳಿಸಿದರು. ಬಳಿಕ ಬಂದ ವೇದ ಕೃಷ್ಣಮೂರ್ತಿ ಸಹ ಕೇವಲ 45 ಎಸೆತಗಳಲ್ಲಿ 70 ರನ್ ಸಿಡಿಸಿ  ಭಾರತದ ಮೊತ್ತ 250ರ ಗಡಿ ದಾಟುವಂತೆ ನೋಡಿಕೊಂಡರು. ಅಂತಿಮವಾಗಿ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 265 ರನ್ ಪೇರಿಸಿತು.

ಭಾರತ ನೀಡಿದ 266 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಕಿವೀಸ್ ವನಿತೆಯರು ಆರಂಭದಿಂದಲೇ ನಿಗದಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಹೋದರು. ಭಾರತದ ಆರ್ ಎಸ್ ಗಾಯಕ್ವಾಡ್ ಅವರ ಮಾರಕ ಬೌಲಿಂಗ್ ತತ್ತರಿಸಿದ  ಕಿವೀಸ್ ಪಡೆ ಅಕ್ಷರಶಃ ಪೆವಿಲಿಯನ್ ಪರೇಡ್ ನಡೆಸಿತು. ತಂಡದ ಪರ ಸ್ಯಾಟರ್ಥ್ ವೈಟ್ ಗಳಿಸಿದ 25 ರನ್ ಗಳೇ ಕಿವೀಸ್ ಪರ ಆಟಗಾರ್ತಿಯೊಬ್ಬರ ವೈಯುಕ್ತಿಕ ಗರಿಷ್ಠ ರನ್ ಗಳಿಕೆಯಾಗಿತ್ತು. ಅಂತಿಮವಾಗಿ ನ್ಯೂಜಿಲೆಂಡ್ ತಂಡ  ಕೇವಲ 25.3 ಓವರ್ ಗಳಲ್ಲಿ ಕೇವಲ 79 ರನ್ ಗಳಿಸಿ ಆಲ್ ಔಟ್ ಆಯಿತು. ಆ ಮೂಲಕ ಭಾರತ ತಂಡ ಭರ್ಜರಿ 186 ಅಂತರದಿಂದ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com