ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್)ನಲ್ಲಿ ಅಕ್ರಮ ಹೂಡಿಕೆ ಮಾಡಿದ್ದಾರೆ ಎಂದು ಆರೋಪದಡಿ ಬಾಲಿವುಡ್ ನಟ ಶಾರುಖ್ ಖಾನ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪದಡಿ ಕೆಕೆಆರ್ ತಂಡದ ಮಾಲೀಕ ಶಾರುಖ್ ಖಾನ್ ಅವರಿಗೆ ಸಮನ್ಸ್ ನೀಡಿರುವ ಜಾರಿ ನಿರ್ದೇಶನಾಲಯ ಜುಲೈ 23ರೊಳಗೆ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಸೂಚಿಸಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೌತಮ್ ಗಂಭೀರ್ ಮುನ್ನಡೆಸುತ್ತಿದ್ದಾರೆ. ಕೆಕೆಆರ್ ತಂಡ ಎರಡು ಬಾರಿ ಐಪಿಎಲ್ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.