ಮಹಿಳಾ ವಿಶ್ವಕಪ್ ಫೈನಲ್‌ಗೂ ಮುನ್ನ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬಂಪರ್ ಕೊಡುಗೆ

ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತ ಮಹಿಳಾ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬಂಪರ್ ಕೊಡುಗೆ ನೀಡಿದೆ...
ಭಾರತ ಮಹಿಳಾ ತಂಡ
ಭಾರತ ಮಹಿಳಾ ತಂಡ
Updated on: 
ನವದೆಹಲಿ: ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತ ಮಹಿಳಾ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬಂಪರ್ ಕೊಡುಗೆ ನೀಡಿದೆ. 
ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಫೈನಲ್ ತಲುಪಿದ್ದು ನಾಳೆ ಇಂಗ್ಲೆಂಡ್ ಜತೆ ಸೆಣೆಸಲಿದೆ. ಇದಕ್ಕೂ ಮುನ್ನ ಬಿಸಿಸಿಐ ಟೀಂ ಇಂಡಿಯಾ ಮಹಿಳಾ ಆಟಗಾರ್ತಿಯರಿಗೆ ತಲಾ 50 ಲಕ್ಷ ಬಹುಮಾನವನ್ನು ಘೋಷಿಸಿದೆ. 
ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ ಆರು ಬಾರಿ ಮಹಿಳಾ ವಿಶ್ವಕಪ್ ಗೆದ್ದಿದ್ದ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 36 ರನ್ ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿತ್ತು. ಈ ಅಮೋಘದ ಜಯದ ಹಿನ್ನೆಲೆ ಬಿಸಿಸಿಐ ಬಂಪರ್ ಕೊಡುಗೆ ಘೋಷಿಸಿದೆ. 
2005ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಅಪ್ ಆಗಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಗಳಿಸಿ ಫೈನಲ್ ಪ್ರವೇಶಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com