ವಿಶ್ವಕಪ್ ಬದಲಿಗೆ ಚಾಂಪಿಯನ್ಸ್ ಟ್ರೋಫಿ ಎಂದು ಟ್ವೀಟ್ ಮಾಡಿದ ರಾಜೀವ್ ಶುಕ್ಲಾ!

ಭಾರತ ವನಿತೆಯರ ತಂಡಕ್ಕೆ ಅಭಿನಂದನೆ ಸಲ್ಲಿಸುವ ಭರದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಯಡವಟ್ಟು ಮಾಡಿಕೊಂಡಿದ್ದು, ತಮ್ಮ ತಪ್ಪಾದ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಮಹಿಳಾ ವಿಶ್ವಕಪ್ ಫೈನಲ್ ಗೇರಿದ ಭಾರತ ವನಿತೆಯರ ತಂಡಕ್ಕೆ ಅಭಿನಂದನೆ ಸಲ್ಲಿಸುವ ಭರದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಯಡವಟ್ಟು ಮಾಡಿಕೊಂಡಿದ್ದು, ತಮ್ಮ ತಪ್ಪಾದ  ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಹಾಲಿ ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲಾ ಟ್ವೀಟಿಗರ ಆಹಾರವಾಗಿದ್ದು, ಇತ್ತೀಚೆಗೆ ಮಹಿಳಾ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್  ಗೇರಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸುವ ಭರದಲ್ಲಿ ಶುಕ್ಲಾ ಯಡವಟ್ಟು ಮಾಡಿಕೊಂಡಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ರಾಜೀವ್ ಶುಕ್ಲಾ, ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಗೇರಿದ ಭಾರತ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

ಆದರೆ ಅವರ ಟ್ವೀಟ್ ನಲ್ಲಿ ವಿಶ್ವಕಪ್ ಬದಲಿಗೆ ಚಾಂಪಿಯನ್ಸ್ ಟ್ರೋಫಿ ಎಂದು ಟ್ವೀಟ್ ಮಾಡಿರುವುದು ಟ್ವೀಟಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಬಿಸಿಸಿಐನ ಮಾಜಿ ಅಧ್ಯಕ್ಷ ಈ ತಪ್ಪಿಗೆ ಟ್ವೀಟಿಗರು ಯಾವುದೇ ಮುಲಾಜಿಲ್ಲದೇ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಶ್ವಕಪ್ ಟೂರ್ನಿಯನ್ನು ಚಾಂಪಿಯನ್ಸ್ ಟ್ರೋಫಿ ಟೂರ್ನಿ ಎಂದು ತಿಳಿದ ಶುಕ್ಲಾ ಮೇಧಾವಿ ತನಕ್ಕೆ ಹಾಗೂ ಅವರ ಕ್ರಿಕೆಟ್ ಅನುಭವಕ್ಕೆ ಹ್ಯಾಟ್ಸ್ ಆಫ್ ಹೇಳಲೇಬೇಕು ಎಂದು ಟ್ವೀಟಿಗರು  ಕಿಡಿಕಾರಿದ್ದಾರೆ.

ತಮ್ಮ ಟ್ವೀಟ್ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಶುಕ್ಲಾ ಆ ಟ್ವೀಟ್ ಗಳನ್ನು ಕೂಡಲೇ ಡಿಲೀಟ್ ಮಾಡಿದರಾದರೂ, ಅಷ್ಚು ಹೊತ್ತಿಗಾಗಲೇ ವೈರಲ್ ಆಗಿದ್ದ ಟ್ವೀಟ್ ನ ಸ್ಕ್ರೀನ್ ಶಾಟ್ ತೆಗೆದು ಟ್ವೀಟಿಗರು ವ್ಯಾಪಕ ಟೀಕೆ  ಮಾಡುತ್ತಿದ್ದಾರೆ.

ಶುಕ್ಲಾ ಅವರ ಟ್ವೀಟ್ ಗೆ ಟ್ವಿಟರ್ ನಲ್ಲಿ ಬಂದ ಪ್ರತಿಕ್ರಿಯೆಗಳ ಪೈಕಿ ಕೆಲ ಪ್ರಮುಖ ಟ್ವೀಟ್ ಗಳು ಇಲ್ಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com