ಸೋಲಿನಿಂದ ಹತಾಶರಾಗಬೇಡಿ; ಟೀಂ ಇಂಡಿಯಾ ಮಹಿಳಾ ತಂಡಕ್ಕೆ ಸಚಿನ್ ಕಿವಿಮಾತು

ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 9 ರನ್ ಗಳಿಂದ ಸೋಲು ಕಂಡಿದ್ದ ಟೀಂ ಇಂಡಿಯಾ ಮಹಿಳಾ ತಂಡಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಾಂತ್ವನ...
ಟೀಂ ಇಂಡಿಯಾ
ಟೀಂ ಇಂಡಿಯಾ
ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 9 ರನ್ ಗಳಿಂದ ಸೋಲು ಕಂಡಿದ್ದ ಟೀಂ ಇಂಡಿಯಾ ಮಹಿಳಾ ತಂಡಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಾಂತ್ವನ ಹೇಳಿದ್ದಾರೆ. 
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿನ್ ಸೋಲಿನಿಂದ ಹತಾಶರಾಗಬೇಡಿ. ಕೆಲವೊಮ್ಮ ಈಗೆಲ್ಲಾ ಆಗುವುದುಂಟು. ಇದರಿಂದ ಚಿಂತಿಸಬೇಡಿ ಎಂದು ಟ್ವೀಟ್ ಮಾಡಿದ್ದು ಇದೇ ವೇಳೆ ವಿಶ್ವಕಪ್ ಚಾಂಪಿಯನ್ ತಂಡ ಇಂಗ್ಲೆಂಡ್ ತಂಡಕ್ಕೆ ಶುಭಾಶಯ ಹೇಳಿದ್ದಾರೆ.
ಇನ್ನು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ಹಾರ್ದಿಕ್ ಪಾಂಡ್ಯ, ಮಹಿಳಾ ತಂಡದ ಕೆಚ್ಚೆದೆಯ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಡೀ ದೇಶ ನಿಮ್ಮ ಕೆಚ್ಚೆದೆಯ ಪ್ರದರ್ಶನಕ್ಕೆ ಹೆಮ್ಮೆ ಪಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com